Homeಜಿಲ್ಲೆಶಿವಮೊಗ್ಗ ; ಮಿಂಚು – ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ

ಶಿವಮೊಗ್ಗ ; ಮಿಂಚು – ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ

Spread the love

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈಋತ್ಯ ಮಾನ್ಸೂನ್ ಮತ್ತೆ ಚುರುಕು ಪಡೆದುಕೊಂಡಿದ್ದು ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಕರ್ನಾಟಕದ ವಿವಿಧ ಭಾಗದಲ್ಲಿ ಜುಲೈ 14ರ ವರೆಗೆ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹೇಳಲಾಗಿದೆ.
ರಾಜ್ಯದ ಪ್ರಮುಖ ಆರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಇದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿಯೂ ರಣಭೀಕರ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಈ ಭಾಗದಲ್ಲಿ ಮಿಂಚು – ಗುಡುಗು ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments