Homeಜಿಲ್ಲೆಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಕೇಂದ್ರ ಸಚಿವರು ಸೇತುವೆ ಉದ್ಘಾಟನೆ: ಸಿಎಂ

ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಕೇಂದ್ರ ಸಚಿವರು ಸೇತುವೆ ಉದ್ಘಾಟನೆ: ಸಿಎಂ

Spread the love

ಬೆಂಗಳೂರು,ಜು.14:  ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಸೇತುವೆ ಉದ್ಘಾಟನೆ  ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಆದರೆ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದು ಸಿ.ಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ನನಗೂ ಭಾಗವಹಿಸುವ ಇಚ್ಛೆಯಿಂದ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವರಿಗೆ ತಿಳಿಸಿದ್ದೆ ಆದರೂ ಶಿಷ್ಠಾಚಾರದ ಮೀರಿ ಮಾಡುತ್ತಿದ್ದಾರೆ ಎಂದರು.

ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಂಬಂಧಪಟ್ಟ ಸಾಗರ ತಾಲ್ಲೂಕಿನ ಮುಖಂಡರಿಗೆ ತಿಳಿಸಲಾಗಿದ್ದು, ಕಾರ್ಯಕ್ರಮವನ್ನು ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ.

ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು  ಕೇಂದ್ರ ಸರ್ಕಾರವೇ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ.  ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರನ್ನಾಗಲೀ, ಸ್ಥಳೀಯ ಶಾಸಕರನ್ನಾಗಲೀ ಆಮಂತ್ರಣ ನೀಡಲಾಗಿಲ್ಲ ಎಂದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments