Homeರಾಜಕೀಯಹೊಳೆಬಾಗಿಲು ಸೇತುವೆ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿದ ಸಚಿವರು-ಶಾಸಕರು - ರಾಜಕೀಯ ತಿಕ್ಕಾಟದ ನಡುವೆಯೂ ಕೇಂದ್ರಸಚಿವರಿಂದ...

ಹೊಳೆಬಾಗಿಲು ಸೇತುವೆ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿದ ಸಚಿವರು-ಶಾಸಕರು – ರಾಜಕೀಯ ತಿಕ್ಕಾಟದ ನಡುವೆಯೂ ಕೇಂದ್ರಸಚಿವರಿಂದ ಸೇತುವೆ ಉದ್ಘಾಟನೆ

Spread the love

ಹೊಳೆಬಾಗಿಲು ಸೇತುವೆ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿದ ಸಚಿವರು-ಶಾಸಕರು

ರಾಜಕೀಯ ತಿಕ್ಕಾಟದ ನಡುವೆಯೂ ಕೇಂದ್ರಸಚಿವರಿಂದ ಸೇತುವೆ ಉದ್ಘಾಟನೆ
ಶಿವಮೊಗ್ಗ: ಜಿಲ್ಲೆಯ  ಸಾಗರದ ಅಂಬಾರಗೋಡ್ಲು -ಕಳಸವಳ್ಳಿ ಸೇತುವೆ (ಹೊಳೆಬಾಗಿಲು)ಉದ್ಘಾಟನೆ ಸೇರಿದಂತೆ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡುವಲ್ಲಿ ಶಿಷ್ಟಾಚಾರ ಪಾಲನೆ ಆಗಿಲ್ಲ, ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಭಾಗವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರೆ. ಇತ್ತ ಸೇತುವೆ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲು ಅಗಮಿಸಿದ್ದ  ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಅವರು  ಸೇತುವೆಯನ್ನು ವೀಕ್ಷಿಸಿ,  ಬಹಿರಂಗ ಸಮಾರಂಭದಲ್ಲಿ ಭಾಗವಹಿಸದೆ ಶಿವಮೊಗ್ಗದ ಕಡೆಗೆ ತೆರಳಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ. ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದರು.ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಂಬಂಧಪಟ್ಟ ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮವನ್ನು ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು  ಕೇಂದ್ರ ಸರ್ಕಾರವೇ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ.  ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರನ್ನಾಗಲೀ, ಸ್ಥಳೀಯ ಶಾಸಕರನ್ನಾಗಲೀ ಆಮಂತ್ರಣ ನೀಡಲಾಗಿಲ್ಲ ಎಂದರು.
ಸಚಿವರು, ಶಾಸಕರಿಂದ ಬಹಿಷ್ಕಾರ
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸೇತುವೆ ಉದ್ಘಾಟಿಸಿದ್ದು ಸಾಗರ ನಗರದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಉದ್ಘಾಟನೆ, ಶಂಕುಸ್ಥಾಪನೆಯ ಸಮಾರಂಭದಲ್ಲಿ ಪಾಲ್ಗೊಂಡಿದ್ದರು, ಇವರೊಂದಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಂಸದ ಬಿ.ವೈ ರಾಘವೇಂದ್ರ ಅವರುಗಳು ಭಾಗವಹಿಸಿದ್ದ ಈ ಸಮಾರಂಭಕ್ಕೆ ಸಚಿವ ಸತೀಶ್ ಜಾರಕೀಹೋಳಿ ಅವರು ಪಾಲ್ಗೋಳ್ಳದೆ ಸರ್ಕಾರಿ ಅತಿಥಿ ಗೃಹದಿಂದ ಶಿವಮೊಗ್ಗದ ಕಡೆಗೆ ತೆರಳಿದರು.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯಲೋಕೋಪಯೋಗಿ ಸಚಿವರ ಸತೀಶ್ ಜಾರಕೀಹೋಳಿ ಅವರು ಈ ಸೇತುವ ಉದ್ಘಾಟನೆ ಎರಡು ಸರ್ಕಾರಗಳಿಗೂ ಪ್ರತಿಷ್ಠೆಯ ವಿಷಯವಲ್ಲ. ಅಭಿವೃದ್ದಿ ಕಾರ್ಯಕ್ರಮಗಳನ್ನು ನಡೆಸುವಾಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಯೋಗದೊಂದಿಗೆ ಹೋಗಬೇಕು. ಶಿಷ್ಟಾಚಾರ ಪಾಲಿಸುವಲ್ಲಿ ಲೋಪ ಆಗಿದೆ. ಪದೇ ಪದೇ ಇಂತಹ ಕಾರ್ಯಕ್ರಮಗಳು ಬರುತ್ತಿರುತ್ತವೆ.  ಗೊಂದಲವಿಲ್ಲದಂತೆ ನಡೆಸಲು ಎರಡೂ ಸರ್ಕಾರಗಳು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದರು.

ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮಾತನಾಡಿ ರಾಜಕೀಯ ಮಾಡುವಾಗ ಖಂಡಿತ ಮಾಡುತ್ತೇವೆ  ಸೇತುವೆ ವಿಷಯದಲ್ಲಿ ರಾಜಕೀಯ ಮಾಡಬೇಡಿ. ಆ ಭಾಗದ ಜನರಿಗೆ ಏನು ಮಾಡಬೇಕೋ ಅದನ್ನು ಮಾಡಿ ಹೋಗಿ. ಮುಖ್ಯಮಂತ್ರಿಗಳನ್ನು ಕರೆಯಿಸಬೇಕಿತ್ತು. ಅವರನ್ನು ಆಹ್ವಾನಿಸದಿರುವುದು ಖಂಡನೀಯ. ಮುಂದಿನ ದಿನಗಳಲ್ಲಿ  ಮುಖ್ಯಮಂತ್ರಿಗಳನ್ನು ಕರೆಯಿಸಿ ಸೇತುವ ಉದ್ಘಾಟನೆ ಮಾಡಿಸುತ್ತೇವೆ. ಕ್ಷೇತ್ರದ ಅಭಿವೃದ್ದಿಗೆ ಕೋಟ್ಯಾಂತರ ರೂಪಾಯಿಗಳನ್ನು ರಾಜ್ಯ ಸರ್ಕಾರ ಕೊಟ್ಟಿದೆ.  ಮುಖ್ಯಮಂತ್ರಿಗಳನ್ನು ಕಡೆಗಣಿಸಿರುವುದು ದುರಂತ , ನಾನು ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರು ಗೈರು ಆಗಿದ್ದರು.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments