Homeಜಿಲ್ಲೆ500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

Spread the love

ಬೆಂಗಳೂರು, ಜುಲೈ 14: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು..

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ  ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ವಿವರಿಸಿದರು.

   

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments