Homeಜಿಲ್ಲೆಅಂಗನವಾಡಿಯ 18 ಬೇಡಿಕೆಗಳನ್ನು ಈಡೇರಿಸಿದ್ದೇವೆ: ಲಕ್ಷ್ಮಿ ಹೆಬ್ಬಾಳ್ಕರ್

ಅಂಗನವಾಡಿಯ 18 ಬೇಡಿಕೆಗಳನ್ನು ಈಡೇರಿಸಿದ್ದೇವೆ: ಲಕ್ಷ್ಮಿ ಹೆಬ್ಬಾಳ್ಕರ್

Spread the love

ಬೆಂಗಳೂರು, ಜು.15 : ಅಂಗನವಾಡಿ ಕಾರ್ಯಕರ್ತರು 25 ಬೇಡಿಕೆ ಇಟ್ಟಿದ್ದರು. ಅದರಲ್ಲಿ ಇಲ್ಲಿಯವರೆಗೂ 18 ಬೇಡಿಕೆ ಈಡೇರಿಸಿದ್ದೇವೆ ಎಂದು  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಮಂಗಳವಾರ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು,  ಅಂಗನವಾಡಿಯಲ್ಲಿ ಕಾರ್ಯಕರ್ತರ ಬೇಡಿಕೆ ಈಡೇರಿಸುವಂತೆ ಎಲ್ಲಾ ಯೂನಿಯನ್ ಗಳಿಂದ ಒತ್ತಡ ಹಾಕುತ್ತಿದ್ದರು. ಅದರಂತೆ  18 ಬೇಡಿಕೆಗಳನ್ನು ಈಡೇರಿಸಿದ್ದೇವೆ.  ಮುಂದಿನ ದಿನಗಳಲ್ಲಿ  ಉಳಿದ ಬೇಡಿಕೆಯನ್ನು ಈಡೇರಿಸುತ್ತೇವೆ ಎಂದರು.

ನಮಗೆ ರಾಜ್ಯದಲ್ಲಿ ಅಂಗನವಾಡಿ ಕಟ್ಟಡಗಳ ಕೊರತೆ ಇಲ್ಲ. ಆದರೂ  ಸ್ವಂತ ಕಟ್ಟಡಕ್ಕಾಗಿ ಸಿ ಎಂಗೆ ಮನವಿ ಮಾಡಿದ್ದೇವೆ.ಸಿಎ ಸೈಟ್ ಕೊಡಲು ಸಿಎಂ ಹೇಳಿದ್ದಾರೆ. ಇದರ ಜೊತೆಗೆ ಈ ವರ್ಷವೇ ಅಂಗನವಾಡಿಯಲ್ಲಿ ಎಲ್ ಕೆಜಿ ಆರಂಭ ಮಾಡಲಿದ್ದು, ಈಗಾಗಲೇ ಕಾರ್ಯಕರ್ತರಿಗೆ ಗೌರವಧನವನ್ನು ಹೆಚ್ಚು ಮಾಡಿದ್ದೇವೆ ಎಂದು ತಿಳಿಸಿದರು. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments