ಮೈಸೂರು,ಜು.18: ಧರ್ಮಸ್ಥಳದಲ್ಲಿ ನಡೆದಿರುವ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶುಕ್ರವಾರ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು,
ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರು ಒಳಗೊಂಡ ಎಸ್ ಐ ಟಿ ರಚನೆ ಮಾಡಿ ತನಿಖೆಯಾಗಬೇಕೆಂದು ಹಿರಿಯ ವಕೀಲರು ಮನವಿ ಮಾಡಿ ಒತ್ತಾಯಿಸಿದ್ದು, ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತು ವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ ಐ ಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಹಾಗೂ ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ, ಕಾನೂನು ರೀತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.
