Homeಜಿಲ್ಲೆಧರ್ಮಸ್ಥಳ ಸೌಜನ್ಯ ಪ್ರಕರಣ-ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ: ಸಿ ಎಂ

ಧರ್ಮಸ್ಥಳ ಸೌಜನ್ಯ ಪ್ರಕರಣ-ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ: ಸಿ ಎಂ

Spread the love

ಮೈಸೂರು,ಜು.18: ಧರ್ಮಸ್ಥಳದಲ್ಲಿ ನಡೆದಿರುವ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು,

ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರು ಒಳಗೊಂಡ ಎಸ್ ಐ ಟಿ ರಚನೆ ಮಾಡಿ ತನಿಖೆಯಾಗಬೇಕೆಂದು ಹಿರಿಯ ವಕೀಲರು ಮನವಿ ಮಾಡಿ ಒತ್ತಾಯಿಸಿದ್ದು,  ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತು ವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ ಐ ಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಹಾಗೂ ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ, ಕಾನೂನು ರೀತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments