Homeಜಿಲ್ಲೆತೀರ್ಥಹಳ್ಳಿಯಲ್ಲಿ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ

ತೀರ್ಥಹಳ್ಳಿಯಲ್ಲಿ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ

Spread the love

ಶಿವಮೊಗ್ಗ,ಜು.29:ಕರ್ನಾಟಕ ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕರು ಜುಲೈ 31 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ತೀರ್ಥಹಳ್ಳಿಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿಗಳನ್ನು ಸ್ವೀಕರಿಸುವರು.

ಸಾರ್ವಜನಿಕರು ಈ ಸಭೆಗೆ ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ದ ಲಿಖಿತವಾಗಿ ಅಹವಾಲು ಸಲ್ಲಿಸಬಹುದೆಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments