Homeದೇಶಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ: ಪ್ರಜ್ವಲ್ ರೇವಣ್ಣ ದೋಷಿ. ನಾಳೆ ಶಿಕ್ಷೆ ಘೋಷಣೆ

ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ: ಪ್ರಜ್ವಲ್ ರೇವಣ್ಣ ದೋಷಿ. ನಾಳೆ ಶಿಕ್ಷೆ ಘೋಷಣೆ

Spread the love

ಬೆಂಗಳೂರು: ಮನೆಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ,ಅಪಹರಣ ಪ್ರಕರಣದಲ್ಲಿ ಮಾಜಿ ಸಂಸದ  ಜೆಡಿಎಸ್ ಮುಖಂಡ   ಪ್ರಜ್ವಲ್ ರೇವಣ್ಣ ಅವರು ದೋಷಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ಘೋಷಿಸಿದೆ.

ಶಿಕ್ಷೆ ಪ್ರಮಾಣವನ್ನು ನಾಳೆ ನ್ಯಾಯಾಲಯ ಪ್ರಕಟಗೊಳಿಸಲಿದೆ.

ಪ್ರಜ್ವಲ್ ರೇವಣ್ಣ ಮನೆಕೆಲಸಕ್ಕೆ  ಕೆ ಆರ್ ನಗರದ ಮೂಲದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಸಾವಿರಾರು ಪೆನ್ ಡ್ರೈವ್ ಗಳ ಮೂಲಕ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ದ ವಿಡಿಯೋ ಹರಿದಾಡಿದ್ದವು.

ಈ ಸಂಬಂಧ ಕೇಸು ದಾಖಲಿಸಿಕೊಂಡು ತನಿಖೆ ನಡೆಸಿದ ಎಸ್ ಐಟಿ ಪೊಲೀಸರು ಪ್ರಜ್ವಲ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ 1200 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಇದಲ್ಲದೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅವರ ಖಾಸಗಿತನವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದ ಆರೋಪದ ಮೇಲೆ ಒಟ್ಟು ನಾಲ್ಕು ಕೇಸುಗಳು ದಾಖಲಾಗಿದ್ದು. 14ತಿಂಗಳಿಂದ ಜೈಲಿನಲ್ಲಿದ್ದಾರೆ.

ಇದೀಗ ಒಂದು ಪ್ರಕರಣದಲ್ಲಿ ಮಾತ್ರ ದೋಷಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ನೀಡಿದೆ.

ನ್ಯಾಯಾಧೀಶರಾದ ಗಜಾನನ ಭಟ್ ನಾಳೆ ಶಿಕ್ಷೆ ಪ್ರಮಾಣ ಘೋಷಿಸಲಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments