ಬೆಂಗಳೂರು, ನ.29: ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾನು ಹಾಗೂ ಡಿ.ಕೆ.ಶಿವಕುಮಾರ್ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಸ್ಪಷ್ಟಪಡಿಸಿದರು.
ಅವರು ಇಂದು ತಮ್ಮ ನಿವಾಸದಲ್ಲಿ ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೊಂದಿಗೆಜಂಟಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದರು.
ನಾವಿಬ್ಬರೂ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಅಧಿವೇಶನಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ ಮಾಡಲು ಸೂಚಿಸಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ. ಈಗಲೂ ಇಲ್ಲ . ನಮ್ಮ ನಡುವೆ ಆಗಿರುವ ಒಪ್ಪಂದದಬಗ್ಗೆ ಹೈ ಕಮಾಂಡಿಗೆ ಮಾಹಿತಿ ನೀಡಲಾಗುವುದು ಎಂದರು.
ಆದರೆ ಗೊಂದಲ ಸೃಷ್ಟಿಯಾಗಿದೆ. ಕೆಲವು ಮಾಧ್ಯಮಗಳು ಇದನ್ನು ಸೃಷ್ಟಿಸಿದ್ದಾರೆ ಎಂದರು. ಕೆಲವುಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿದರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ಇಂಥ ಕಾರಣಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ ಎಂದರು.
ಉಪಹಾರ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಾಗೂ ಮುಖ್ಯಮಂತ್ರಿಗಳ ಕಾನೂನುಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದರು. ಉಪಹಾರ ಸಭೆಯಲ್ಲಿ ಏನೂ ಮಾತನಾಡಿಲ್ಲ. ಡಿ.ಕೆ.ಶಿವಕುಮಾರ್ ಮತ್ತು ನಾನು ನಮ್ಮ ಮನೆಯಲ್ಲಿ ಒಟ್ಟಿಗೆ ಉಪಹಾರ ಸೇವಿಸಿದ್ದೇವೆ. ಪಕ್ಷದ ವರಿಷ್ಠರಾದ ವೇಣುಗೋಪಾಲ್ಅವರು ಪೊನ್ನಣ್ಣ ಅವರಿಗೆ ಕರೆ ಮಾಡಿ ಡಿ.ಕೆ.ಶಿವಕುಮಾರ್ ಅವರನ್ನು ಉಪಾಹಾರಕ್ಕೆ ಕರೆಯಲುಸೂಚಿಸಿದ್ದರು. ಡಿ.ಕೆ ಶಿವಕುಮಾರ್ ಅವರಿಗೂ ಇದನ್ನೇ ತಿಳಿಸಿದರು. ಡಿ.ಕೆ. ಶಿವಕುಮಾರ್ ಅವರೇ, ನಮ್ಮಮನೆಗೆ ಊಟಕ್ಕೆ ಬನ್ನಿ ಎಂದು ಆಹ್ವಾನವಿತ್ತಿದ್ದರು. ಮತ್ತೊಂದು ದಿನ ಊಟಕ್ಕೆ ಬರೋಣ ಎಂದು ತಿಳಿಸಿನಮ್ಮ ಮನೆಗೇ ಉಪಾಹಾರಕ್ಕೆ ಕರೆದೆವು ಎಂದರು.
*2028 ರಲ್ಲಿ ಕಾಂಗ್ರೆಸ್ ನ್ನು ಮತ್ತೆ ಅಧಿಕಾರಕ್ಕೆ ತರಲು ಕಾರ್ಯತಂತ್ರಗಳ ಬಗ್ಗೆ ಚರ್ಚೆ*
ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ನಾವು ಈ ಬಗ್ಗೆಮಾತನಾಡಿದ್ದೇವೆ. 2028 ರ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಕಾರ್ಪೋರೇಷನ್, ತಾಲ್ಲೂಕು , ಜಿಲ್ಲಾ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳು ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಚರ್ಚೆಮಾಡಿದ್ದೇವೆ. 2028 ರಲ್ಲಿ ಕಾಂಗ್ರೆಸ್ ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಚರ್ಚಿಸಲಾಗಿದೆ. 2022 ರವಿಧಾನ ಸಭಾ ಚುನಾವಣೆಯಲ್ಲಿ ಕೆಲಸ ಮಾಡಿದಂತೆಯೇ ಮುಂದೆಯೂ ಒಟ್ಟಿಗೆ ಸಾಗುವ ತೀರ್ಮಾನಮಾಡಿದ್ದೇವೆ ಎಂದರು.
*ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ*
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈಗಲೂ ಇಲ್ಲ, ಮುಂದೆಯೂ ಇರುವುದಿಲ್ಲ. ಚಳಿಗಾಲದಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಪ್ರಾರಂಭವಾಗಲಿದೆ. ನಾವು ವಿರೋಧ ಪಕ್ಷದವರನ್ನುಸಮರ್ಥವಾಗಿ ಇವರಿಗೆ ಎದುರಿಸಿದ್ದೇವೆ ಮುಂದೆಯೂ ಎದುರಿಸುತ್ತೇವೆ. ಬಿಜೆಪಿ, ಜೆಡಿಎಸ್ ಅಪಪ್ರಚಾರ, ಸುಳ್ಳು ಆರೋಪಗಳನ್ನು, ಅಪವಾದಗಳನ್ನು ಮಾಡುವುದು ಬಿಜೆಪಿ ಹಾಗೂ ಜೆಡಿಎಸ್ ಅವರ ಚಾಳಿ. ಇವರಿಬ್ಬರನ್ನೂ ಸಮರ್ಥವಾಗಿ ನಾನು ಮತ್ತು ಉಪಮುಖ್ಯಮಂತ್ರಿಗಳು ಎದುರಿಸುತ್ತೇವೆ. ಅದಕ್ಕೆಅಗತ್ಯವಿರುವ ಕಾರ್ಯತಂತ್ರಗಳನ್ನು ರೂಪಿಸಿಕೊಂಡಿದ್ದೇವೆ ಎಂದರು.
*ಮಾಧ್ಯಮಗಳು ಗೊಂದಲ ಸೃಷ್ಟಿಸಿವೆ*
ಇತ್ತೀಚೆಗೆ ಅಧಿಕಾರ ಹಸ್ತಾತ್ಮ್ಯರದ ಬಗ್ಗೆ ಉಂಟಾಗಿರುವ ಗೊಂದಲಗಳಿಗೆ ಮಾಧ್ಯಮಗಳೇ ಕಾರಣ ಎಂದುಆರೋಪಿಸಿದ ಸಿಎಂ, ಬಿಜೆಪಿ , ಜೆಡಿಎಸ್ ಪಕ್ಷಗಳು ಪತ್ರಿಕೆಗಳಲ್ಲಿ ಅವಿಶ್ವಾಸ ನಿರ್ಣಯತೆಗೆದುಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಅಸಂಭವವಾಗಿದ್ದು, ನಾವು 142 ಜನರಿದ್ದು, ಅವರು64 ಜನ ಮಾತ್ರ, ಜೆಡಿಎಸ್ 18 ಇದ್ದಾರೆ. ಅವರಿಬ್ಬರೂ ಸೇರಿ 82 ಜನರಾಗುತ್ತಾರೆ. ಇದೊಂದು ವಿಫಲಪ್ರಯತ್ನ ಎಂದು ಭಾವಿಸಿದ್ದೇನೆ ವಿರೋಧ ಪಕ್ಷಗಳು ಏನೇ ಸುಳ್ಳು ಆರೋಪಗಳನ್ನು ಮಾಡಿದರೂಅವನ್ನೆಲ್ಲಾ ಸಮರ್ಥವಾಗಿ ಎದುರಿಸುವ ಕೆಲಸ ಮಾಡುತ್ತೇವೆ ಎಂದರು.
