ಬೆಂಗಳೂರು,ಡಿ.2 : ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ. ಬೆಳಗಾವಿ ಅಧಿವೇಶದಲ್ಲಿವಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿಅವರ ನಿವಾಸಕ್ಕೆ ಭೇಟಿ ನೀಡಿದೆ. ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ. ಡಿಸೆಂಬರ್ 8 ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ.
ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದತಿಳಿದು ಬಂದಿದೆ.ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದರು.
ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ರೈತರು, ರೈತ ಮುಖಂಡರು,ಕಾರ್ಖಾನೆ ಮಾಲಿಕರ ಜೊತೆ ಚರ್ಚಿಸಿ, ಸಮಸ್ಯೆಯ ಪರಿಹಾರಕ್ಕೆ ಅಂತಿಮ ರೂಪವನ್ನುನೀಡಲಾಗಿದೆ. ಕಬ್ಬು ಒಂದು ಟನ್ ಗೆ ಸರ್ಕಾರದಿಂದ 50 ರೂ.ನಿಗದಿಪಡಿಸಲಾಗಿದೆ.
ಮೆಕ್ಕೆ ಜೋಳ ಖರೀದಿಯ ಬಗ್ಗೆ ರೈತರು, ಡಿಸ್ಟಲರಿ ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಲಾಗಿದೆ. ಕೇಂದ್ರಸರ್ಕಾರ ಮೆಕ್ಕೆಜೋಳಕ್ಕೆ 2,400 ರೂ.ಗಳನ್ನು ಬೆಂಬಲ ಬೆಲೆಯಾಗಿ ನಿಗದಿಪಡಿಸಿದೆ. ಆದರೆ ಮಾರುಕಟ್ಟೆದರ 1900 ರಿಂದ 2100 ರೂ.ವೆರೆಗಿರುವುದರಿಂದ ಡಿಸ್ಟಲರಿ ಕಂಪನಿಗಳು , ಎಂಎಸ್ ಪಿ ದರದಲ್ಲಿಯೇರೈತರಿಂದ ಮೆಕ್ಕೆಜೋಳವನ್ನು ಖರೀದಿಸಬೇಕೆಂದು ಮನವೊಲಿಸಲಾಗುತ್ತಿದೆ. ಅಂತೆಯೇ ಪೌಲ್ಟ್ರಿಫಾರಂಗಳು , ಪಶುಆಹಾರಗಳಿಗಾಗಿ ಮೆಕ್ಕೆ ಜೋಳವನ್ನು ಬಳಸಲಾಗುತ್ತದೆ ಎಂದರು.
ಈ ಬಾರಿ ರೈತರು ಮೆಕ್ಕೆ ಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದು, ಸುಮಾರು 55 ಲಕ್ಷ ಮೆ.ಟನ್ಉತ್ಪಾದನೆಯಾಗುವ ಅಂದಾಜಿದೆ ಎಂದರು.
ಪೌಲ್ಟ್ರಿ 20 ಲಕ್ಷಕ್ಕಿಂತ ಹೆಚ್ಚು ಉತ್ಪಾದಿಸುವ ನಿರೀಕ್ಷೆಯಿದೆ. ಪಶುಆಹಾರ 4-5 ಲಕ್ಷ ಟನ್ ಹಾಗೂ 7-10 ಲಕ್ಷದ ಎಥನಾಲ್ ಗಾಗಿ ಬಳಸುತ್ತಾರೆ. ಇದೆಲ್ಲಾ ಕೇಂದ್ರ ಸರ್ಕಾರ ಮಾಡಬೇಕು .ಎಥನಾಲ್ ಹಾಗೂ ಎಂಎಸ್ ಪಿ, ಎಫ್ ಆರ್ ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೆ ಕೇಂದ್ರ ಸರ್ಕಾರದವರುನಮಗೇನು ಜವಾಬ್ದಾರಿ ಇಲ್ಲವೆಂಬಂತೆ ಮಾತನಾಡುತ್ತಾರೆ. ಸಂಸದರ ಸಭೆ ಕರೆಯಬೇಕು ಎಂದುಚರ್ಚಿಸಲಾಗಿದ್ದು, ಡಿಸೆಂಬರ್ 8 ರಂದು ಸಂಸತ್ತು ಮುಂದೂಡಬಹುದೆಂದು ಭಾವಿಸಿದ್ದು, ಅಂದೇ ಸಭೆಕರೆಯಬೇಕೆಂದು ತೀರ್ಮಾನಿಸಲಾಗಿದೆ ಎಂದರು. ಏಕೆಂದರೆ ಅಂದು ರಾಜ್ಯದ ಸಂಸದರು ಅಲ್ಲಿಯೇಉಪಸ್ಥಿತರಿರುತ್ತಾರೆ ಎಂದರು.
*ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ*
ಶಾಸಕರು ಹಾಗೂ ಸಚಿವರಿಗೆ ಇದನ್ನೇ ಹೇಳುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ ನಮ್ಮಲ್ಲಿಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಸಿಎಲ್. ಪಿಸಭೆ ಕರೆದಾಗ ಎಲ್ಲರೂ ಊಟಕ್ಕೆ ಸೇರುತ್ತೇವೆ ಎಂದರು.
*ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರು*
ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತನಂಬಿಕೊಂಡಿದ್ದೇವೆ. 2028 ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆತರಲಾಗುವುದು ಎಂದರು.
ಪರಮೇಶ್ವರ್ ಅವರು ಸಿಎಂ ಹಾಗೂ ಡಿಸಿಎಂ ಅವರನ್ನು ಉಪಾಹಾರಕ್ಕೆ ಕರೆಯುವುದಾಗಿ ಹೇಳಿರುವ ಬಗ್ಗೆಮಾತನಾಡಿ ಅದನ್ನು ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸುತ್ತಾರೆ ಎಂದು ಹೇಳಿದರು.
