ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳ ಅವಧಿಗೆ ನೇಮಕ ಮಾಡಿದ್ದ ಅಧ್ಯಕ್ಷರ ಅವಧಿಯು ಫೆ. 28 ಕ್ಕೆ ಕೊನೆಗೊಳ್ಳಲಿದ್ದು, ಶಿವಮೊಗ್ಗ ನಗರಾಭಿವೃದ್ದಿ ಪ್ರಾಧಿಕಾರ , ಕಾಡಾ ಸೇರಿದಂತೆ ಹತ್ತು ಪ್ರಾಧಿಕಾರಗಳ ಅಧ್ಯಕ್ಷರ ಅವಧಿಯನ್ನು ವಿಸ್ತರಿಸುವಂತೆ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಫೆ. 26 ರಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು.
ಪಕ್ಷದ ಅಧಿಕಾರಕ್ಕೆ ಬಂದು ಬಹಳ ತಡವಾಗಿ ಕಾರ್ಯಕರ್ತರಿಗೆ ಅಧಿಕಾರ ಹಂಚಿಕೆ ಮಾಡಲಾಗಿದ್ದು, ಮುಂದಿನ ಎರಡು ವರೆ ವರ್ಷಗಳಲ್ಲಾದರೂ ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದ ಕಾರ್ಯಕರ್ತರಿಗೆ ಅಧಿಕಾರ ಭಾಗ್ಯ ಇಲ್ಲದಂತಾಗಿದೆ.