ಶಂಕರಘ್ಟ, ಮಾ. 12: ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಲಾದ 2026ನೇ ಸಾಲಿನ‘ಸಹ್ಯಾದ್ರಿ ಉತ್ಸವ‘ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಗುರುವಾರ (ಮಾರ್ಚ್ 12) ವಿಶ್ವವಿದ್ಯಾಲಯದ ಆವರಣದಲ್ಲಿ ಅತ್ಯಂತ ಸಡಗರದಿಂದ ಚಾಲನೆ ನೀಡಲಾಯಿತು.
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಸುಮಾರು 40ಕ್ಕೂ ಹೆಚ್ಚು ಕಾಲೇಜುಗಳ ವಿದ್ಯಾರ್ಥಿಗಳು ಈಸಾಂಸ್ಕೃತಿಕ ಹಬ್ಬದಲ್ಲಿ ಭಾಗವಹಿಸಲು ಆಗಮಿಸಿದ್ದಾರೆ.
ಕಾರ್ಯಕ್ರಮದ ಆರಂಭದಲ್ಲಿ ಕುವೆಂಪು ಪ್ರತಿಮೆಗೆ ಹಾರ ಹಾಕುವ ಮೂಲಕ ಗೌರವ ಸಲ್ಲಿಸಲಾಯಿತು. ನಂತರ ಸಾಂಪ್ರದಾಯಿಕವಾಗಿ ಧ್ವಜಾರೋಹಣನೆರವೇರಿಸುವ ಮೂಲಕ ಸಹ್ಯಾದ್ರಿ ಉತ್ಸವ ಹಾಗೂ ಪಥಸಂಚಲನಕ್ಕೆ ಅಧಿಕೃತ ಚಾಲನೆ ನೀಡಲಾಯಿತು.
ವಿಶ್ವವಿದ್ಯಾಲಯದ ಬಸವ ಸಭಾಭವನದಲ್ಲಿ ನಡೆದ ಉದ್ಘಾಟನಾ ಸಮಾರಂಭಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಡಾ. ಜಯಮಾಲಾ ಅವರು ಮುಖ್ಯಅತಿಥಿಯಾಗಿ ಆಗಮಿಸಿ ದೀಪ ಬೆಳಗಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಜಯಮಾಲಾ ಅವರು “ನಾನು ಪುನರ್ವಸತಿಯ ಬಗ್ಗೆಸುದೀರ್ಘವಾಗಿ ಸಂಶೋಧನೆ ನಡೆಸಿ ಥೀಸಿಸ್ ಬರೆದಿದ್ದೇನೆ. ಅಲ್ಮಟ್ಟಿಯ ಅಣೆಕಟ್ಟು ಸಂತ್ರಸ್ತರ ನೋವುಮತ್ತು ಅನುಭವಗಳನ್ನು ಹತ್ತಿರದಿಂದ ಕಂಡಿದ್ದೇನೆ. ನನ್ನ ಈ ಶೈಕ್ಷಣಿಕ ಸಾಧನೆಗಾಗಿ ಅಂದಿನರಾಷ್ಟ್ರಪತಿಗಳಾದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರಿಂದ ಪ್ರಶಸ್ತಿ ಪಡೆದ ಸಾರ್ಥಕತೆ ನನಗಿದೆ. ನಿರಾಶ್ರಿತ ಭಾವ ಎಂಬುದು ಪ್ರತಿಯೊಬ್ಬ ಮನುಷ್ಯನನ್ನೂ ಕಾಡುವಂತಹದ್ದು, ಈ ಕಾರ್ಯಕ್ರಮಕ್ಕೆಬರಬೇಕೆಂಬ ಹಂಬಲ ನನಗಿತ್ತು,” ಎಂದು ನೆನಪು ಮಾಡಿಕೊಂಡರು.

ಕುವೆಂಪು ಅವರ “ಹೋಗುವೆನು ನಾ ಮಲೆಯ ನಾಡಿಗೆ” ಎಂಬ ಸಾಲುಗಳನ್ನು ಸ್ಮರಿಸುತ್ತಾ, “ಮಲೆನಾಡುಅತ್ಯಂತ ನಯನ ಮನೋಹರವಾದ ಕಾಡುಗಳನ್ನು ಹೊಂದಿರುವ ತಾಣ. ಇದು ಕೇವಲ ಪ್ರಕೃತಿಯಲ್ಲ, ದೈತ್ಯ ಪ್ರತಿಭೆಗಳನ್ನು ನಾಡಿಗೆ ನೀಡಿದ ಪವಿತ್ರ ಭೂಮಿ,” ಎಂದು ಮಲೆನಾಡಿನ ಸಾಹಿತ್ಯಿಕ ಶ್ರೀಮಂತಿಕೆಯನ್ನು ಬಣ್ಣಿಸಿದರು.
“ವಿದ್ಯಾರ್ಥಿಗಳು ತಮ್ಮ ಜಾಣ್ಮೆಯನ್ನು ಸರಿಯಾದ ದಾರಿಯಲ್ಲಿ ಉಪಯೋಗಿಸಬೇಕು. ಮನುಷ್ಯನನ್ನು ಮೃದುವಾಗಿರಿಸುವ ಗುಣಗಳಾದ ಸಾಹಿತ್ಯ, ಸಂಗೀತ ಮತ್ತು ಕಲೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಬದುಕು ಸಾರ್ಥಕವಾಗುತ್ತದೆ. ಪ್ರೀತಿ, ಸಹಿಷ್ಣುತೆ ಮತ್ತು ಉಪಕಾರದ ಗುಣಗಳನ್ನು ಮರೆಯಬೇಡಿ. ಮನುಷ್ಯ ಭಾವನಾಶೂನ್ಯನಾದರೆ ಎಷ್ಟೇ ಆಸೆಗಳಿದ್ದರೂ ಬದುಕು ಶೂನ್ಯವಾಗುತ್ತದೆ. ವಿಶ್ವವಿದ್ಯಾಲಯನೀಡುವ ಉತ್ತಮ ಶಿಕ್ಷಣವನ್ನು ಸದುಪಯೋಗಪಡಿಸಿಕೊಳ್ಳಿ,” ಎಂದು ಕರೆ ನೀಡಿದರು.

ಇಂದಿನ ಜಾಗತಿಕ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, “ಇಡೀ ದೇಶ ಮತ್ತು ಜಗತ್ತು ಯುದ್ಧದ ಭೀತಿಯಿಂದ ತುಂಬಿದೆ. ಇಂತಹ ಸಮಯದಲ್ಲಿ ಮನುಷ್ಯನಿಗೆ ಎಲ್ಲಕ್ಕಿಂತ ಮೊದಲು ಬೇಕಾಗಿರುವುದು ಮಾನವೀಯತೆ. ಕುವೆಂಪು ಅವರು ಹೇಳಿದಂತೆ ಇದು ‘ಸರ್ವಜನಾಂಗದ ಶಾಂತಿಯ ತೋಟ‘ವಾಗಬೇಕು,” ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅವರು ಮಾತನಾಡಿ, “ಕನ್ನಡಸಿನಿಮಾ ರಂಗವು ಅತ್ಯಂತ ಉತ್ತುಂಗದಲ್ಲಿದ್ದ ಕಾಲದಲ್ಲಿ ತನ್ನ ಅಭಿನಯದ ಮೂಲಕ ಮನೆಮಾತಾದವರು ಡಾ. ಜಯಮಾಲಾ. ಅವರು ಕೇವಲ ಬೆಳ್ಳಿ ಪರದೆಯ ತಾರೆಯಲ್ಲ, ಸಾಧನೆಯ ಶಿಖರಕ್ಕೇರಿದ ‘ಧ್ರುವತಾರೆ‘. ಅವರೊಟ್ಟಿಗಿನ ನೆನಪುಗಳು ಸದಾ ಹಸಿರು. ಅವರು ಅಭಿನಯಿಸಿದ ಚಿತ್ರಗಳು ‘ಸ್ವರ್ಣ ಕಮಲ‘ ಪ್ರಶಸ್ತಿಪಡೆದಿರುವುದು ಅವರ ಕಲಾತ್ಮಕ ಪ್ರತಿಭೆಗೆ ಸಾಕ್ಷಿ. ಅಂತಹ ಸಾಧಕಿ ನಮ್ಮ ನಡುವೆ ಇರುವುದು ಹೆಮ್ಮೆಯವಿಷಯ,” ಎಂದು ಶ್ಲಾಘಿಸಿದರು.
“ಇವತ್ತಿನ ಪಥಸಂಚಲನದ ವೈಭವವೇ ಅದಕ್ಕೆ ಸಾಕ್ಷಿ. ವಿದ್ಯಾರ್ಥಿಗಳು ಪ್ರದರ್ಶಿಸಿದ ವಿವಿಧ ಕಲಾಪ್ರಕಾರಗಳು ಪಥಸಂಚಲನದ ವಿಶೇಷತೆಯನ್ನು ಹೆಚ್ಚಿಸಿವೆ,” ಎಂದು ಮಲೆನಾಡಿನ ಸಾಂಸ್ಕೃತಿಕಶ್ರೀಮಂತಿಕೆಯನ್ನು ಬಣ್ಣಿಸಿದರು. “ವಿದ್ಯಾರ್ಥಿಗಳು ಈ ಮೂರು ದಿನಗಳ ಕಾಲ ಎಲ್ಲವನ್ನೂ ಸಂಭ್ರಮದಿಂದ ಕಲಿಯಬೇಕು. ಇದು ಕೇವಲ ಸ್ಪರ್ಧೆಯಲ್ಲ, ನಿಮ್ಮೊಳಗಿನ ಕಲೆ ಪ್ರದರ್ಶಿಸಲು ಸಿಕ್ಕಿರುವಸುವರ್ಣ ಅವಕಾಶ. ಈ ವೇದಿಕೆಯನ್ನು ಸಮರ್ಥವಾಗಿ ಬಳಸಿಕೊಳ್ಳಿ,” ಎಂದು ಆಶಿಸಿದರು.
ಆಧುನಿಕ ತಂತ್ರಜ್ಞಾನದ ಬಗ್ಗೆ ಮಾತನಾಡುತ್ತಾ, “ಇಂದಿನ ಜಗತ್ತಿನಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ಎಷ್ಟೇ ಮುಂದುವರಿದಿದ್ದರೂ, ಮನುಷ್ಯನ ಮನುಷ್ಯತ್ವವನ್ನು ಮತ್ತು ಭಾವನೆಗಳನ್ನು ಉಳಿಸುವುದು ಕಲೆಮಾತ್ರ. ಎಂತಹ ತಂತ್ರಜ್ಞಾನವೂ ಕಲೆಯನ್ನು ಎಂದಿಗೂ ರೀಪ್ಲೇಸ್ ಮಾಡಲು ಸಾಧ್ಯವಿಲ್ಲ. ಮನುಷ್ಯನಿಗೆಕೊನೆಯವರೆಗೂ ಭರವಸೆ ಇರುವುದು ಕಲೆ ಮತ್ತು ಸಾಹಿತ್ಯದಲ್ಲಿ ಮಾತ್ರ,” ಎಂಬ ಗಹನವಾದ ವಿಚಾರವನ್ನು ಮಂಡಿಸಿದರು.
*ಗಮನಸೆಳೆದ ಪಥಸಂಚಲನ:*


ಪಥ ಸಂಚಲನದಲ್ಲಿ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಾವಾಡಿ, ಕಂಸಾಳೆ, ಕೊಡವ ನೃತ್ಯ, ನವದುರ್ಗೆಯರ ವೇಷಧಾರಿಗಳು, ಪೂಜಾ ಕುಣಿತ, ನಂದಿ ಕೋಲು, ಕಾಡು ಮನುಷ್ಯರವೇಷ ಹಾಗೂ ವೀರಗಾಸೆ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

ವಿಶೇಷವಾಗಿ ಕುವೆಂಪು ಶತಮಾನೋತ್ಸವ ಕಾಲೇಜಿನ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ‘ವಿವಿಧತೆಯಲ್ಲಿ ಏಕತೆ‘ ಎಂಬ ಪರಿಕಲ್ಪನೆಯ ಪಥ ಸಂಚಲನ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ವೇದಿಕೆಯಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ಶ್ರೀ ಎ. ಎಲ್. ಮಂಜುನಾಥ್, ಪರೀಕ್ಷಾಂಗ ಕುಲಸಚಿವಪ್ರೊ. ಆರ್. ತಿಮ್ಮರಾಯಪ್ಪ, ಹಣಕಾಸು ಅಧಿಕಾರಿ ಪ್ರೊ. ಹೆಚ್. ಎನ್. ರಮೇಶ್ ಹಾಗೂ ವಿದ್ಯಾರ್ಥಿಕ್ಷೇಮಪಾಲನಾ ಅಧಿಕಾರಿ ಪ್ರೊ. ಜಿ. ಪ್ರಶಾಂತ್ ನಾಯಕ್, ಪ್ರೊ. ವಿಜಯಕುಮಾರ, ಪ್ರೊ. ವೆಂಕಟೇಶ್, ಪ್ರೊ. ಸತ್ಯಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
