Homeಜಿಲ್ಲೆಕೆಎಫ್‌ಡಿ ನಿಯಂತ್ರಣಕ್ಕೆ ಶೀಘ್ರ ಚಿಕಿತ್ಸೆಗೆ ಕ್ರಮ: ಜಿಲ್ಲಾಧಿಕಾರಿ

ಕೆಎಫ್‌ಡಿ ನಿಯಂತ್ರಣಕ್ಕೆ ಶೀಘ್ರ ಚಿಕಿತ್ಸೆಗೆ ಕ್ರಮ: ಜಿಲ್ಲಾಧಿಕಾರಿ

Spread the love

ಶಿವಮೊಗ್ಗ, ಮಾ.17: ಕೆಎಫ್‌ಡಿ ಕುರಿತು ಸ್ಥಳೀಯ ಜನರಲ್ಲಿ ಅರಿವು ಮೂಡಿಸುವುದು ಹಾಗೂ ಯಾವುದೇರೀತಿಯ ಜ್ವರಕ್ಕೆ ಶೀಘ್ರ ಚಿಕಿತ್ಸೆ ನೀಡುವುದು ಸೇರಿದಂತೆ ಪರಿಣಾಮಕಾರಿಯಾದ ನಿಯಂತ್ರಣ ಕ್ರಮಗಳನ್ನುಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆನೀಡಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಆರೋಗ್ಯ ಇಲಾಖೆಯ ವಿವಿಧಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೆಎಫ್‌ಡಿ ರೋಗವನ್ನು ಹರಡುವ ಉಣ್ಣೆಗಳು ನವೆಂಬರ್ ಯಿಂದ ಮೇ ವರೆಗೆ ಸಕ್ರಿಯವಾಗಿರುತ್ತವೆ. ಹಾಗೂಜನವರಿಯಿಂದ ಮಾರ್ಚ್ ರೋಗ ಹರಡುವ ಅವಧಿಯಾಗಿರುವ ಕಾರಣ ಸಾಗರ, ಸೊರಬ, ಹೊಸನಗರಮತ್ತು ತೀರ್ಥಹಳ್ಳಿ ಭಾಗದಲ್ಲಿ ಜನರು ಸಾಕಷ್ಟು ಎಚ್ಚರಿಕೆ ವಹಿಸಬೇಕು. ತೋಟಕ್ಕೆ, ಕಾಡಿಗೆ ಹೋಗುವಜನರು ಅತ್ಯಂತ ಜಾಗರೂಕತೆಯಿಂದ ಇರಬೇಕು. ಡೇಪಾ ಎಣ್ಣೆಯನ್ನು ಲೇಪನ ಮಾಡಿಕೊಳ್ಳಬೇಕು ಹಾಗೂಜಾನುವಾರುಗಳಿಗೆ ಡೇಪಾ ತೈಲವನ್ನು ಲೇಪನ ಮಾಡಬೇಕೆಂದು ತಿಳಿಸಿದರು.

ಮಲೆನಾಡಿನ ಭಾಗದಲ್ಲಿ, ವಿಶೇಷವಾಗಿ ಮಂಗ ಸತ್ತಿರುವ ಹಾಟ್‌ಸ್ಟಾಟ್‌ಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಯಾವುದೇ ಜ್ವರ ಪ್ರಕರಣಗಳನ್ನು ಶೀಘ್ರವಾಗಿ ಪರಿಗಣಿಸಿ ಚಿಕಿತ್ಸೆ ನೀಡಬೇಕು. ಜ್ವರ ಸರ್ವೇ ಮಾಡಬೇಕು. ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ 10 ಪ್ರತ್ಯೇಕ ಬೆಡ್‌ಗಳನ್ನು ಮೀಸಲಿಡಬೇಕು ಎಂದು ಆರೋಗ್ಯ ಇಲಾಖೆಅಧಿಕಾರಿಳಿಗೆ ಸೂಚನೆ ನೀಡಿದರು.

ಜನರು ಎಚ್ಚರಿಕೆಯಿಂದ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಆರೋಗ್ಯ ಇಲಾಖೆ, ಪಶುಪಾಲನೆ ಮತ್ತು ಪಶುವೈದ್ಯಕೀಯ, ಅರಣ್ಯ, ಆರ್‌ಡಿಪಿಆರ್ ಸೇರಿದಂತೆ ವಿವಿಧ ಇಲಾಖೆಗಳುಸಮನ್ವಯ ಸಾಧಿಸಿ ಕೆಎಫ್‌ಡಿ ಹರಡದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಭಾಗಗಳಲ್ಲಿ ಮಾಹಿತಿ, ಶಿಕ್ಷಣ, ಸಂವಹನ ಚಟುವಟಿಕೆಗಳನ್ನು ಹೆಚ್ಚಿಸಬೇಕು ಎಂದು ಸೂಚನೆ ನೀಡಿದರು.

ಜಿ.ಪಂ ಸಿಇಓ ಮಾತನಾಡಿ, ಜಾನುವಾರುಗಳಿಂದ ಕೆಎಫ್‌ಡಿ ಹರಡುವುದನ್ನು ತಡೆಗಟ್ಟುವ ಸಲುವಾಗಿಜಾನುವಾರುಗಳಿಗೆ ಲಸಿಕೆ ನೀಡಬೇಕು. ದಾಸ್ತಾನು ಇಲ್ಲದಿದ್ದರೆ ತಕ್ಷಣ ಲಸಿಕೆ ತರಿಸಿಕೊಳ್ಳಬೇಕು. ಜಾನುವಾರುಗಳಿಗೆ ಎರಡು ಡೋಸ್ ಲಸಿಕೆಗಳನ್ನು ನೀಡಬೇಕು. ಡೇಪಾ ಎಣ್ಣೆಯನ್ನು ಜಾನುವಾರುಗಳಿಗೆಲೇಪನ ಮಾಡಲು ನೀಡಬೇಕು ಮತ್ತು ತೋಟಕ್ಕೆ, ಹೊರಗೆ ಕೆಲಸಕ್ಕೆ ಹಾಗೂ ಕಾಡಿಗೆ ಹೋಗುವ ಜನರಿಗೆನೀಡಬೇಕು ಎಂದು ಸೂಚನೆ ನೀಡಿದರು.

ಡಿಎಸ್‌ಓ ಡಾ.ನಾಗರಾಜ ನಾಯ್ಕ್ ಮಾತನಾಡಿ, ಕೆಎಫ್‌ಡಿ ಪ್ರಕರಣ ಪತ್ತೆಗಾಗಿ ಜಿಲ್ಲೆಯಲ್ಲಿ ಇಲ್ಲಿಯರೆಗೆ5202 ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಿದ್ದು, 59 ಪಾಸಿಟಿವ್ ಬಂದಿದೆ. 01 ಮರಣ ಸಂಭವಿಸಿದೆ. 457 ಟಿಕ್ಸಂಗ್ರಹಿಸಿದ್ದು, ಯಾವುದೇ ಪಾಸಿಟಿವ್ ಪ್ರಕರಣ ಬಂದಿರುವುದಿಲ್ಲ. 114 ಮಂಗಗಳ ಸಾವು ಸಂಭವಿಸಿದ್ದುಮಂಗ ಅಟಾಪ್ಸಿಯಲ್ಲಿ 31 ಪಾಸಿಟಿವ್ ಬಂದಿದ್ದು, ಮಂಗಗಳ ಸಾವು ಸಂಭಂವಿಸುವ ಸುತ್ತಮುತ್ತಲಿನಪ್ರದೇಶವನ್ನು ಹಾಟ್‌ಸ್ಪಾಟ್ ಎಂದು ಗುರುತಿಸಿ, ಇಲ್ಲಿ ರಾಸಾಯನಿಕಗಳನ್ನು ಸಿಂಪಡಿಸಿ ಸೂಕ್ತಕ್ರಮಗಳನ್ನು ಕೈಗೊಳ್ಳಲಾಗಿದೆ. ಹೈರಿಸ್ಕ್ ಪ್ರದೇಶಗಳಲ್ಲಿ ಟಿಕ್ ಕಲೆಕ್ಷನ್ ಮಾಡಲಾಗುತ್ತಿದೆ ಎಂದರು.

ನಾಯಿ ಕಡಿತಶೀಘ್ರ ಚಿಕಿತ್ಸೆ ಅಗತ್ಯ : ನಾಯಿ ಕಡಿತದಿಂದ ಉಂಟಾಗುವ ರೇಬಿಸ್ ಕಾಯಿಲೆಮಾರಣಾಂತಿಕವಾಗಿದ್ದು, ರೇಬಿಸ್ ಬಂದ ನಂತರ ಇದಕ್ಕೆ ಚಿಕಿತ್ಸೆ ಇಲ್ಲ. ಆದ್ದರಿಂದ ನಾಯಿ ಕಚ್ಚಿದ ತಕ್ಷಣಚಿಕಿತ್ಸೆ ಪಡೆಯಬೇಕು. ಕಡ್ಡಾಯವಾಗಿ ಆಂಟಿ ರೇಬಿಸ್ ಚುಚ್ಚುಮದ್ದು ಪಡೆಯಬೇಕು. ರೇಬಿಸ್ಚಿಕಿತ್ಸೆಯನ್ನು ಯಾವುದೇ ಕಾರಣಕ್ಕೂ ಮಧ್ಯದಲ್ಲಿ ನಿಲ್ಲಿಸಬಾರದು.

ಮನೆ ಮಾಲೀಕರು ಮನೆಯಲ್ಲಿನ ನಾಯಿಗಳಿಗೆ ಹಾಗೂ ಸ್ಥಳೀಯ ಸಂಸ್ಥೆಗಳು, ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಬೀದಿ ನಾಯಿಗಳಿಗೆ ಆಂಟಿ ರೇಬಿಸ್ಚುಚ್ಚುಮದ್ದು ನೀಡಲು ಕ್ರಮ ಕೈಗೊಳ್ಳಬೇಕು. ಸರ್ಕಾರಿ ಕಚೇರಿಗಳು, ವಿವಿಧ ಸಂಸ್ಥೆಗಳ ಆವರಣಗಳಲ್ಲಿನನಾಯಿಗಳನ್ನು ನಿಯಮಾನುಸಾರ ಒಂದು ಬಾರಿ ಶಿಫ್ಟ್ ಮಾಡಿಸಿ ಶೆಲ್ಟರ್ ಕೇರ್ ತೆಗೆದುಕೊಳ್ಳಲು ಕ್ರಮವಹಿಸಬೇಕು. ಬೀದಿ ನಾಯಿಗಳ ನಿಯಂತ್ರಣಕ್ಕೆ ಪಾಲಿಕೆಯಿಂದ ಸೂಕ್ತ ಕ್ರಮದೊಂದಿಗೆ, ಶಾಲೆಗಳು, ಹೋಟೆಲ್‌ಗಳು, ಬೀದಿ ಬದಿ ತಿಂಡಿ ಅಂಗಡಿಗಳು ಉಳಿದ/ತ್ಯಾಜ್ಯ ಆಹಾರವನ್ನು ಸಮರ್ಪಕವಾಗಿವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 3906 ನಾಯಿ ಕಡಿತ ಪ್ರಕರಣ ದಾಖಲಾಗಿದ್ದು ಯಾವುದೇಸಾವು ಸಂಭವಿಸಿರುವುದಿಲ್ಲ ಎಂದರು.

ಹಾವು ಕಡಿತಅರಿವು ಅಗತ್ಯ : ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ 47 ಜನರು ಹಾವು ಕಡಿತಕ್ಕೆಒಳಗಾಗಿದ್ದು ಯಾವುದೇ ಸಾವು ಸಂಭವಿಸಿಲ್ಲ. ಎಲ್ಲ ಆಸ್ಪತ್ರಗಳಲ್ಲಿ ಹಾವು ಕಡಿತಕ್ಕೆ ಚಿಕತ್ಸೆಗೆ ಅಗತ್ಯವಾದಔಷಧಗಳನ್ನು ಲಭ್ಯವಿರುವಂತೆ ನೋಡಿಕೊಳ್ಳಬೇಕು. ಹಾಗೂ ಹಾವು ಕಚ್ಚಿದ ತಕ್ಷಣ ಕೈಗೊಳ್ಳಬೇಕಾದಕ್ರಮಗಳ ಬಗ್ಗೆ ಎಲ್ಲರಲ್ಲಿ ಅರಿವು ಮೂಡಿಸಬೇಕು ಎಂದರು.

ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ ಸಿಇಓ, ತಾಯಿ ಮರಣ ಪರಿಶೋಧನಾ(ಡೆಟ್ ಆಡಿಟ್) ಸಮಿತಿ ಸಭೆನಡೆಸಿ, ಅಧಿಕಾರಿ, ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಡಿಹೆಚ್‌ಓ ಡಾ.ನಟರಾಜ್, ಆರ್‌ಸಿಹೆಚ್ ಅಧಿಕಾರಿಡಾ..ಮಲ್ಲಪ್ಪ, ಡಿಎಲ್‌ಓ ಡಾ.ಕಿರಣ್, ಡಾ.ಗುಡುದಪ್ಪ, ಡಾ.ಹರ್ಷವರ್ದನ್, ತಾಲ್ಲೂಕುವೈದ್ಯಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments