ಶಿವಮೊಗ್ಗ,ಮಾ.24: ಡಾ.ಬಾಬು ಜಗಜೀವನರಾಂ ಭವನದ ಕಾಮಗಾರಿ ಬಹುದಿನಗಳಿಂದ ನೆನೆಗುದಿಗೆ ಬಿದ್ದಿದೆ. ಕಾಮಗಾರಿ ಕೂಡಲೇ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಇಂದು ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ತಯಾರಿ ಕುರಿತು ಏರ್ಪಡಿಸಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡಾ.ಬಾಬು ಜಗಜೀವನರಾಂ ಭವನದ ಸಂಬಂಧಿಸಿದಂತೆ ಬಾಕಿ ಇರುವ ಕಾಮಗಾರಿಗಳಿಗೆ ಈಗ ಯಾವುದೇ ತೊಡಕು ಇಲ್ಲವಾಗಿದ್ದು, ಇನ್ನು ಒಂದು ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಂಡು ಮೇ ಮಾಹೆಯಲ್ಲಿ ಉದ್ಘಾಟನೆಯಾಗಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದರು
