Homeಜಿಲ್ಲೆರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

Spread the love

ಶಿವಮೊಗ್ಗ;ಮಾರ್ಚ್24: 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಅರ್ಹ ಸಾಮಾನ್ಯ ಮತ್ತು ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಿದೆ.

ಸಮಗ್ರ ಪೋಷಕಾಂಶ ನಿರ್ವಹಣೆ ಹಾಗೂ ಸಮಗ್ರ ರೋಗ \ ಕೀಟ ನಿಯಂತ್ರಣಕಾರ್ಯಕ್ರಮದಡಿಜೈವಿಕ ಗೊಬ್ಬರವಾದ ಅರ್ಕ ಮೈಕ್ರೋಬಿಯಲ್ ಕನ್ಸಾರ್ಷಿಯಮ್ ಪರಿಕರವನ್ನು ಮತ್ತು ರಾಷ್ಟ್ರೀಯ ಕೃಷಿವಿಕಾಸ ಯೋಜನೆಯಡಿ ಲಘು ಪೋಷಕಾಂಶಗಳ ಮಿಶ್ರಣ ಅಥವಾ ಬೆಳೆ ಸ್ಪೇಷಲ್ ಪರಿಕರವನ್ನುವಿತರಿಸಲಾಗುತ್ತಿದೆ.

ಆಸಕ್ತ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಬುಕ್, ಆರ್‌ಡಿ ಸಂಖ್ಯೆಇರುವ ಜಾತಿ ಪ್ರಮಾಣ ಪತ್ರ ನಕಲುಗಳೊಂದಿಗೆ ಶಿಕಾರಿಪುರ ತೋಟಗಾರಿಕೆ ಇಲಾಖೆಯ ಹಿರಿಯಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವುದು.

ಹೆಚ್ಚಿನ ಮಾಹಿತಿಗಾಗಿ ತಮ್ಮ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನುಸಂಪರ್ಕಿಸಬಹುದೆಂದು ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments