Homeಜಿಲ್ಲೆಆಸ್ತಿ ತೆರಿಗೆ : ಶೇ.5 ರಿಯಾಯಿತಿ

ಆಸ್ತಿ ತೆರಿಗೆ : ಶೇ.5 ರಿಯಾಯಿತಿ

Spread the love

ಶಿವಮೊಗ್ಗ, ಮಾ.26: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆಪಾಲಿಕೆ ಕಚೇರಿಯ ಆವರಣದಲ್ಲಿ ಕೌಂಟರ್‌ಗಳನ್ನು ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರುನೇರವಾಗಿ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅವಕಾಶವಿರುತ್ತದೆ.

ಅಲ್ಲದೇ ಈಗಾಗಲೇ ಜಾರಿಯಲ್ಲಿರುವಂತೆ ಆಸ್ತಿ ತೆರಿಗೆ ಪಾವತಿಯನ್ನು ಮಹಾನಗರಪಾಲಿಕೆಯ ವೆಬ್‌ಸೈಟ್ವಿಳಾಸ www.shivamoggacitycorp.org ಮುಖಾಂತರ ಆನ್‌ಲೈನ್‌ನಲ್ಲಿ ಹಾಗೂ ಪೇಟಿಎಂ/ನೆಟ್‌ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಶಿವಮೊಗ್ಗ ಒನ್ ವ್ಯವಸ್ಥೆಯಡಿಯಲ್ಲಿ ಆಸ್ತಿ ತೆರಿಗೆಪಾವತಿ ಮಾಡಬಹುದಾಗಿರುತ್ತದೆ. ವಿಶೇಷವಾಗಿ 2026-27 ಖಾತೆದಾರರಿಗೆ ಇಡಿಸಿ (ಪಿಓಎಸ್) ಯಂತ್ರಗಳ ಮೂಲಕ ಸ್ವತಿನ ಆಸ್ತಿ ತೆರಿಗೆಯನ್ನು ಪಾವತಿಸಿದ ರಸೀದಿಯನ್ನು ನೀಡಲಾಗುತ್ತದೆ.

.30 ರವರೆಗೆ ಆರ್ಥಿಕ ವರ್ಷ 2026-27 ನೇ ಸಾಲಿಗೆ ಅನ್ವಯಿಸುವ ಆಸ್ತಿ ತೆರಿಗೆ ಮೇಲಿನ ಶೇ. 5% ತೆರಿಗೆ ರಿಯಾಯಿತಿಯ ಸೌಲಭ್ಯದ ಕಾಲಾವಧಿ ಇರುತ್ತದೆ. ಜೂನ್ 30ರವೆಗೆ ದಂಡರಹಿತವಾಗಿ ಆಸ್ತಿ ತೆರಿಗೆ ಪಾವತಿಸಬಹುದಾಗಿರುತ್ತದೆ.

ಜು. 01 ನಂತರ ಪಾವತಿಸಿದಲ್ಲಿ ಮಾಸಿಕ ಶೇ. 2% ರಷ್ಟು ದಂಡದೊಂದಿಗೆ ಪಾವತಿಸಬೇಕಾಗುತ್ತದೆ. ಆದ್ದರಿಂದ ಸಾರ್ವಜನಿಕರು ಏಪ್ರಿಲ್ 2026 ಅವಧಿಯಲ್ಲಿ ಆಸ್ತಿ ತೆರಿಗೆ ಪಾವತಿಸಿ ಶೇ. 5% ರಿಯಾಯಿತಿ ಪಡೆಯುವಂತೆ ಹಾಗೂ ಆಸ್ತಿ ತೆರಿಗೆ ಪಾವತಿಸಿ ನಗರದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ಎಂದು ಶಿವಮೊಗ್ಗ ಮಹಾನಗರಪಾಲಿಕೆ ಉಪ ಆಯುಕ್ತರು ಪತ್ರಿಕೆ ಪ್ರಕಟಣೆ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments