ಶಿವಮೊಗ್ಗ,ಮಾ.3: ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗರ ಸಂಘದ ವತಿಯಿಂದ ಏ. 5 ರಂದು ಬೆಳಿಗ್ಗೆ 10.30ಕ್ಕೆ ನಗರದ ಹೆಲಿಪ್ಯಾಡ್ ಬಳಿ ಇರುವ ಈಡಿಗರ ಭವನದಲ್ಲಿ ಶಿವಮೊಗ್ಗ ಜಿಲ್ಲಾ ಈಡಿಗರು ಮತ್ತು ದೀವರು ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಹಾಗೂ ಸಾಧಕರಿಗೆ ಸನ್ಮಾನವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಡಾ.ಆರ್. ಶ್ರೀಧರ್ ಹುಲ್ತಿಕೊಪ್ಪ ತಿಳಿಸಿದರು.
ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಸಮಾಜದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು, ದ್ವಿತೀಯ ಪಿಯುಸಿ ಮತ್ತು ಅಂತಿಮ ಪದವಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪತ್ರಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.
ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀಕ್ಷೇತ್ರ ಸಿಗಂದೂರಿನ ಧರ್ಮದರ್ಶಿಯಾದ ಡಾ.ರಾಮಪ್ಪ ವಹಿಸಲಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಉದ್ಘಾಟನೆ ನೆರವೇರಿಸುವರು.
ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಿದ್ದು, ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಡಾ.ಆರ್.ಶ್ರೀಧರ್ ಹುಲ್ತಿಕೊಪ್ಪ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಆರ್ಯ ಈಡಿಗರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಸಿ.ರಾಮಚಂದ್ರ, ಖಜಾಂಜಿ ಹೆಚ್.ರಾಮಪ್ಪ ಕಾಗೋಡು, ಕಾಂಗ್ರೆಸ್ ವಕ್ತಾರ ಜಿ.ಡಿ.ಮಂಜುನಾಥ್, ಪ್ರೊ.ಕಲ್ಲಪ್ಪ. ಕೃಷ್ಣಪ್ಪ, ಕೃಷ್ಣಮೂರ್ತಿ, ಉದಯ್ ಹಾಗೂ ಸಮಾಜ ಮುಖಂಡರು ಹಾಜರಿದ್ದರು.
