Homeಜಿಲ್ಲೆಇನ್ನು ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ಎಫ್‌ಐಡಿ ಸಂಖ್ಯೆ ಕಡ್ಡಾಯ

ಇನ್ನು ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ಎಫ್‌ಐಡಿ ಸಂಖ್ಯೆ ಕಡ್ಡಾಯ

Spread the love

ಶಿವಮೊಗ್ಗ ಏ.06: ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್‌ಐಡಿ) ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕಿರಣ್ ಕುಮಾರ್ ತಿಳಿಸಿದ್ದಾರೆ.

2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ ಜಾರಿಗೆ ಬರಲಿದ್ದು, ರಸಗೊಬ್ಬರ ವಿತರಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಕಾಳಸಂತೆಯಲ್ಲಿ ಗೊಬ್ಬರ ಮಾರಾಟವಾಗುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ.

ಕೆ–ಕಿಸಾನ್ ತಂತ್ರಾಂಶ ಬಳಕೆ: ರೈತರು ತಮ್ಮ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿಎಷ್ಟು ಪ್ರಮಾಣದ ಗೊಬ್ಬರ ಅಗತ್ಯವಿದೆಯೋ ಅಷ್ಟನ್ನು ಮಾತ್ರ ‘ಕೆ–ಕಿಸಾನ್‘ ತಂತ್ರಾಂಶದ ಮೂಲಕ ವಿತರಿಸಲಾಗುವುದು.

ಹೊಸ ಎಫ್‌ಐಡಿ ನೋಂದಣಿ: ಇದುವರೆಗೆ ಫಾರ್ಮರ್ ಐಡಿ ಹೊಂದಿರದ ರೈತರು ತಕ್ಷಣವೇ ತಮ್ಮದಾಖಲೆಗಳಾದ ಪಹಣಿ, ಬ್ಯಾಂಕ್ ಪಾಸ್ ಬುಕ್ ಮತ್ತು ಆಧಾರ್ ಕಾರ್ಡ್ನೊಂದಿಗೆ ಹತ್ತಿರದ ರೈತ ಸಂಪರ್ಕಕೇಂದ್ರ, ತೋಟಗಾರಿಕೆ ಇಲಾಖೆ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬೇಕು.

ಸರ್ವೆ ನಂಬರ್ ಜೋಡಣೆ: ಈಗಾಗಲೇ ಎಫ್‌ಐಡಿ ಹೊಂದಿರುವ ರೈತರು ತಮ್ಮ ಎಲ್ಲಾ ಸರ್ವೆ ನಂಬರ್‌ಗಳನ್ನು ಅದಕ್ಕೆ ಜೋಡಣೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಮಾರಾಟಗಾರರಿಗೆ ಎಚ್ಚರಿಕೆ: ಅಧಿಕೃತ ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ಕೆ–ಕಿಸಾನ್ ತಂತ್ರಾಂಶದಲ್ಲಿ ರೈತರ ಎಫ್‌ಐಡಿ ನಮೂದಿಸಿಯೇ ಗೊಬ್ಬರ ಮಾರಾಟ ಮಾಡಬೇಕು. ಈ ಸಂಬಂಧ ಇಲಾಖಾಧಿಕಾರಿಗಳಿಗೆ ತರಬೇತಿ ಹಾಗೂ ಮಾಹಿತಿ ನೀಡಲಾಗಿದೆ. ಚಿಲ್ಲರೆ ರಸಗೊಬ್ಬರ ಮಾರಾಟಗಾರರುತಮ್ಮ ಎಲ್ಲ ಓ ಫಾರಂ ನವೀಕರಣಗೊಳಿಸಿಕೊಳ್ಳಬೇಕು. ಒಂದು ವೇಳೆ ಮಾರಾಟಗಾರರು ಓ ಫಾರಂ ಗಳ ನೋಂದಣಿ ಇಲ್ಲದೇ ಮಾರಾಟ ಮಾಡಿದಲ್ಲಿ, ನಿಯಮ ಮೀರಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಥವಾ ಕೃಷಿಯೇತರ ಉದ್ದೇಶಕ್ಕೆ ಗೊಬ್ಬರ ನೀಡಿದರೆ ಅಂತಹ ಮಾರಾಟಗಾರರ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments