Homeಜಿಲ್ಲೆಸಮರ್ಥ್ ಪರವಾಗಿ ಜವಳಿ ನಿಗಮದ ಅಧ್ಯಕ್ಷ ಚೇತನ್ ಮತಯಾಚನೆ

ಸಮರ್ಥ್ ಪರವಾಗಿ ಜವಳಿ ನಿಗಮದ ಅಧ್ಯಕ್ಷ ಚೇತನ್ ಮತಯಾಚನೆ

Spread the love

ಶಿವಮೊಗ್ಗ ,ಏ.7: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರದ ಕೊನೆಯ ದಿನವಾದ ಇಂದು ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ.ಗೌಡ ಅವರು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಅವರೊಂದಿಗೆ  ಪರವಾಗಿ ಮನೆ ಮನೆ ಪ್ರಚಾರದಲ್ಲಿ ಪಾಲ್ಗೊಂಡರು.

ಹದಡಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮಹದೇವಿಪುರ, ವಡೇರಹಳ್ಳಿ, ಮುದಹದಡಿ ಗ್ರಾಮಗಳಲ್ಲಿ ಬೆಳಗ್ಗೆಯಿಂದಲೇ ಮನೆ ಮನೆಗೆ ತೆರಳಿ ಪ್ರಚಾರ ನಡೆಸುವ ಮೂಲಕ ಅಭ್ಯರ್ಥಿ ಸಮರ್ಥ್ ಅವರಿಗೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು. ಪ್ರಚಾರದ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳನ್ನು ಪ್ರಸ್ತಾಪಿಸುವುದರ ಮೂಲಕ ಕಾಂಗ್ರೆಸ್ ಜನಪರವಾದ ಪಕ್ಷವಾಗಿದ್ದು, ಪಕ್ಷವನ್ನು ಬೆಂಬಲಿಸುವಂತೆ ಕೋರಿದರು.

ಮಹದೇವಿಪುರ, ವಡೇರಹಳ್ಳಿ, ಮುದಹದಡಿಗಳಲ್ಲಿ ಪಕ್ಷದ ಮುಖಂಡರೊಂದಿಗೆ ಮನೆ ಮನೆಗೆ ಭೇಟಿನೀಡಿದ ಅಭ್ಯರ್ಥಿ ಸಮರ್ಥ್ ಅವರು, ತಮ್ಮ ತಾತಾ ಶಾಮನೂರು ಶಿವಶಂಕರಪ್ಪನವರ ಆದರ್ಶಗಳನ್ನು, ಅವರ ಆಶಯಗಳನ್ನು ಮುನ್ನಡೆಸಿಕೊಂಡು ಹೋಗುವುದರ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ಹದಡಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮಹದೇವಪುರ, ಮುದಹದಡಿ, ವಡೇರಹಳ್ಳಿ, ಬಲ್ಲೂರು, ಶಿರಗನಹಳ್ಳಿ ಗ್ರಾಮಗಳ ಉಸ್ತುವಾರಿಯನ್ನು ಕಾಂಗ್ರೆಸ್ ಪಕ್ಷವು ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ. ಗೌಡ  ನೇತೃತ್ವದ ತಂಡಕ್ಕೆ ವಹಿಸಿತ್ತು, ಅದೇ ಗ್ರಾಮಗಳಲ್ಲಿ ಇಂದು ಪ್ರಚಾರ ನಡೆಯಿತು. ಪಕ್ಷದ ಅಭ್ಯರ್ಥಿ ಪರವಾಗಿ ಇಲ್ಲಿ ಉತ್ತಮ ಪ್ರಚಾರ ನಡೆದಿದೆ. ಪಕ್ಷದ ಸಿದ್ಧಾಂತ, ಸರ್ಕಾರದ ಅಭಿವೃದ್ದಿ ಯೋಜನೆಗಳನ್ನು ಪ್ರಸ್ತಾಪಿಸಿ ಮತಯಾಚನೆ ಮಾಡಲಾಗಿದೆ ಎಂದು ಅವರು ಪ್ರತಿಕ್ರಿಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments