Homeಜಿಲ್ಲೆನಿಗದಿಗಿಂತ ಹೆಚ್ಚಿನ ದರಕ್ಕೆ ಆಟೋ ಎಲ್‌ಪಿಜಿ/ಸಿಎನ್‌ಜಿ ಮಾರಾಟ ಮಾಡಿದರೆ ಕಠಿಣ ಕ್ರಮ ಅದರ ಸಂಪೂರ್ಣ...

ನಿಗದಿಗಿಂತ ಹೆಚ್ಚಿನ ದರಕ್ಕೆ ಆಟೋ ಎಲ್‌ಪಿಜಿ/ಸಿಎನ್‌ಜಿ ಮಾರಾಟ ಮಾಡಿದರೆ ಕಠಿಣ ಕ್ರಮ ಅದರ ಸಂಪೂರ್ಣ ಮಾಹಿತಿ ಇಲ್ಲಿದೆ

Spread the love

ಶಿವಮೊಗ್ಗ, .7: ಜಿಲ್ಲೆಯಾದ್ಯಂತ ಇರುವ ಆಟೋ ಎಲ್‌ಪಿಜಿ ಮತ್ತು ಸಿಎನ್‌ಜಿ ಬಂಕ್‌ಗಳಲ್ಲಿ ಇಂಧನವನ್ನು ಸರ್ಕಾರ ಹಾಗೂ ತೈಲ ಕಂಪನಿಗಳು ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ.

ದರ ಪ್ರದರ್ಶನ ಕಡ್ಡಾಯ: ತೈಲ ಕಂಪನಿಗಳು ಅಥವಾ ಖಾಸಗಿ ಸಂಸ್ಥೆಗಳು ನಿಗದಿಪಡಿಸಿದ ದರದ ವಿವರವನ್ನು ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಕಾಣುವಂತೆ ಬಂಕ್‌ಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು.

ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ: ಯಾವುದೇ ಕಾರಣಕ್ಕೂ ನಿಗದಿತ ದರಕ್ಕಿಂತ ಹೆಚ್ಚಿನ ಹಣವನ್ನು ಗ್ರಾಹಕರಿಂದ ಪಡೆಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಕಾನೂನು ಕ್ರಮದ ಎಚ್ಚರಿಕೆ: ಒಂದು ವೇಳೆ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವುದು ಕಂಡುಬಂದಲ್ಲಿ, ಅಂತಹ ಬಂಕ್ ಮಾಲೀಕರ ವಿರುದ್ಧಅಗತ್ಯ ವಸ್ತುಗಳ ಕಾಯ್ದೆ-1955′ ಮತ್ತುಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ರೆಗ್ಯುಲೇಷನ್ ಆಫ್ ಯೂಸ್ ಇನ್ ಮೋಟರ್ ವೆಹಿಕಲ್ಸ್) ಆರ್ಡರ್-2001′ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments