Homeಜಿಲ್ಲೆಪಾರದರ್ಶಕವಾಗಿ ಮತ್ತು ನಿಖರವಾಗಿ ಜನಗಣತಿ ಮಾಡಿ: ಡಿಸಿ ಸೂಚನೆ

ಪಾರದರ್ಶಕವಾಗಿ ಮತ್ತು ನಿಖರವಾಗಿ ಜನಗಣತಿ ಮಾಡಿ: ಡಿಸಿ ಸೂಚನೆ

Spread the love

ಶಿವಮೊಗ್ಗ .08: ಜನ ಗಣತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ನಿಖರವಾಗಿ ನಡೆಸುವಂತೆ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಯವರು ನಿರ್ದೇಶನ ನೀಡಿದರು.

ಮಂಗಳವಾರ ನಗರದ ಬಿ ಹೆಚ್ ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಶಿವಮೊಗ್ಗ ಗ್ರಾಮಾಂತರ ವಿಭಾಗದ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಏರ್ಪಡಿಸಲಾಗಿದ್ದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗಣತಿ ಸಂದರ್ಭದಲ್ಲಿ ಪ್ರತಿಯೊಂದು ಕುಟುಂಬದ ಸದಸ್ಯರು ನೀಡುವ ಮಾಹಿತಿ ಅತ್ಯಂತ ನಿಖರವಾಗಿರಬೇಕು. ಉಪಜಾತಿ ಮತ್ತು ಪರ್ಯಾಯ ಹೆಸರುಗಳ ಬಗ್ಗೆ ಗೊಂದಲ ಉಂಟಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದ ಅವರು ಸ್ವಯಂ ಗಣತಿ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಜಿಲ್ಲೆಯ ಪ್ರತಿಯೊಂದು ಮನೆ ಮತ್ತು ಪ್ರದೇಶದ ನಿವಾಸಿಗಳನ್ನು ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಒಳಪಡಿಸಬೇಕು. ಯಾವುದೇ ಒಂದು ಕುಟುಂಬವೂ ಗಣತಿಯಿಂದ ವಂಚಿತವಾಗಬಾರದು ಎಂದು ತಿಳಿಸಿದ ಅವರು ಗಣತಿಗಾಗಿ ಬಳಸಲಾಗುವ ಡಿಜಿಟಲ್ ಪೋರ್ಟಲ್‌ಗಳಲ್ಲಿ ದತ್ತಾಂಶವನ್ನು ದಾಖಲಿಸುವಾಗ ತಾಂತ್ರಿಕ ದೋಷಗಳಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ಸಾರ್ವಜನಿಕರು ನೀಡುವ ವೈಯಕ್ತಿಕ ಮತ್ತು ಸಾಮಾಜಿಕ ಮಾಹಿತಿಯ ಗೌಪ್ಯತೆಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಭರವಸೆ ನೀಡಿದ ಅವರು ತಹಶೀಲ್ದಾರ್‌ಗಳು, ಮೇಲ್ವಿಚಾರಕರು ಮತ್ತು ಗಣತಿದಾರರು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ವೇಳೆ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಶಿವಮೊಗ್ಗ ತಹಶೀಲ್ದಾರ್ ರಾಜೀವ್, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments