Homeಜಿಲ್ಲೆಪಾಲಿಕೆ ವ್ಯಾಪ್ತಿಯ ಬಡಾವಣೆಗೆ 'ಎಸ್. ಬಂಗಾರಪ್ಪ' ಅವರ ಹೆಸರಿಡಲು ಸರ್ಕಾರದ ಅನುಮೋದನೆ

ಪಾಲಿಕೆ ವ್ಯಾಪ್ತಿಯ ಬಡಾವಣೆಗೆ ‘ಎಸ್. ಬಂಗಾರಪ್ಪ’ ಅವರ ಹೆಸರಿಡಲು ಸರ್ಕಾರದ ಅನುಮೋದನೆ

Spread the love

ಶಿವಮೊಗ್ಗ,ಏ.8: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬೊಬ್ಬನಕಟ್ಟೆ ಆಶ್ರಯ ಬಡಾವಣೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಸ್. ಬಂಗಾರಪ್ಪ ಅವರ ಹೆಸರನ್ನು ನಾಮಕರಣ ಮಾಡಲು ರಾಜ್ಯ ಸರ್ಕಾರ ಅಧಿಕೃತವಾಗಿ ಹಸಿರು ನಿಶಾನೆ ತೋರಿಸಿದೆ.

ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಕುರಿತು ಆದೇಶ ಹೊರಡಿಸಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆಯ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದೆ.

ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಕಲಂ 293(1) ರನ್ವಯ ಸರ್ಕಾರಕ್ಕೆ ಇರುವ ಅಧಿಕಾರವನ್ನು ಬಳಸಿ ಆದೇಶ ಹೊರಡಿಸಲಾಗಿದ್ದು, ಹಿಂದೆ ಶಿವಮೊಗ್ಗ ಮಹಾನಗರ ಪಾಲಿಕೆಯು ಬಡಾವಣೆಗೆ ಮಾಜಿ ಮುಖ್ಯಮಂತ್ರಿಗಳ ಹೆಸರಿಡುವಂತೆ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರ, ಈಗ ಅಂತಿಮ ಅನುಮೋದನೆ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments