ಶಿವಮೊಗ್ಗ ,ಏ.13 : ಬೆಳಿಗ್ಗೆ 9 ಗಂಟೆಗೆ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೊರಟಿದ್ದ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, 12 ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ಇಂದು ಬೆಳಿಗ್ಗೆ ಶಿಕಾರಿಪುರ ನಗರದ ಖಾಸಗಿ ಬಸ್ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಈ ಘಟನೆ ಸಂಭವಿಸಿದ್ದು, ಬಸ್ ಗೆ ಅಡ್ಡ ಬಂದ ಬೈಕ್ ಸವಾರನ ಜೀವ ಉಳಿಸಲು ಹೋಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಗಮನಿಸಿ:ಸಮಯ ಮೀರಿದ ಅಧಿಕಾರಿಗಳು- ಶಾಸಕ ಕೆಂಡಾಮಂಡಲ

ಬಸ್ನಲ್ಲಿ ಸುಮಾರು 25 ಕ್ಕೂ ಹೆಚ್ಚು ಪ್ರಯಾಣಿಕರು ಇದ್ದು, ಈಗಾಗಲೇ ಗಾಯಾಗೊಂಡಿರುವ 12 ಮಂದಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ 9 ತಿಂಗಳ ಗರ್ಭೀಣಿಯೂ ಸೇರಿದ್ದಾರೆ.
