ಬೆಂಗಳೂರು, ಏ.15:ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡಲಾಗುವ 2025 -26 ನೇ ಸಾಲಿನ ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ಖ್ಯಾತ ಸಾಹಿತಿ ದೇವನೂರು ಮಹಾದೇವ ಅವರು ಭಾಜನರಾಗಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರತಿ ವರ್ಷ ವಿವಿಧ ಪ್ರಶಸ್ತಿಗಳಿಗೆ ಗಣ್ಯರನ್ನು ಆಯ್ಕೆ ಮಾಡಲಾಗುತ್ತಿತ್ತು. ಈ ಬಾರಿ ಪಂಪ ಪ್ರಶಸ್ತಿಗೆ ದೇವನೂರು ಮಹಾದೇವ ಸೇರಿದಂತೆ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಶ್ರೀ ಸಿದ್ದರಾಮ ಶರಣರು ಬೆಲ್ದಾಳ, ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪುರಸ್ಕಾರಕ್ಕೆ ಶ್ರೀ ಭಾನು ಕೀರ್ತಿ ಭಟ್ಟಾರಕ ಸ್ವಾಮೀಜಿಗಳು, ಕಂಬದಹಳ್ಳಿ ಭಾಜನರಾಗಿದ್ದಾರೆ.
ಗಮನಿಸಿ:ಅಕ್ಷಯ ತೃತೀಯದಂದು ಬಾಲ್ಯವಿವಾಹ ಸಾಧ್ಯತೆ : ತಡೆಗೆ ಕಟ್ಟೆಚ್ಚರ
ಕೆ ಜಿ ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿಗೆ ಅಲ್ಲಾಭಕ್ಷ್ ಮೀರಸಾಹೇಬ ಮಿರ್ಜಿ,
ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಡಾ. ಸುಕನ್ಯಾ ಮಾರುತಿ, ಡಾ ಗುಬ್ಬಿ ವೀರಣ್ಣ ಪ್ರಶಸ್ತಿಗೆ ಜಿ ವಿಶಾರದಾ, ಬಿ ವಿ ಕಾರಂತ ಪ್ರಶಸ್ತಿಗೆ ಪ್ರಸನ್ನ, ಶಿವಮೊಗ್ಗ, ಡಾ. ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿಗೆ ಗಂಗಾರಾಮ ಚಂಡಾಳ ,ಕೋಲಾರ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ ವಿ. ಹರಿ ರಾಮ್, ಜಕಣಾಚಾರಿ ಪ್ರಶಸ್ತಿಗೆ ಶ್ರೀ ಅಶೋಕ್ ಗುಡಿಗಾರ್, ಜಾನಪದ ಶ್ರೀ ಪ್ರಶಸ್ತಿಗೆ ಎಂ ಮಹದೇವಯ್ಯ ಹಾಗೂ ಬಿ ಲಕ್ಷ್ಮಣ, ಸಂಗೊಳ್ಳಿ ರಾಯಣ್ಣ ಪ್ರಶಸ್ತಿಗೆ ಸಿದ್ದನಗೌಡ ಪಾಟೀಲ್. ಧಾರವಾಡ, ಅಕ್ಕಮಹಾದೇವಿ ಪ್ರಶಸ್ತಿಗೆ ಕೆ.ನೀಲಾ, ಕಾಯಕಯೋಗಿ ಶ್ರೀಸಿದ್ದರಾಮೇಶ್ವರ ಪ್ರಶಸ್ತಿಗೆ ಪ್ರೊ.ಎಸ್ ಜಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಕುಮಾರವ್ಯಾಸ ಪ್ರಶಸ್ತಿಗೆ ಕಲ್ಲಿನಾಥ ಶಾಸ್ತ್ರಿ, ಗದಗ, ನಾಟ್ಯರಾಣಿ ಶಾಂತಲಾ ಪ್ರಶಸ್ತಿಗೆ ಪ್ರತಿಭಾ ಪ್ರಹ್ಲಾದ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
