ಶಿವಮೊಗ್ಗ ,ಏ16: ನಗರದಲ್ಲಿ ಉದ್ಭವವಾಗಿರುವ ಕಲುಷಿತ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಇನ್ನೊಂದು ವಾರದಲ್ಲಿ ಇತ್ಯರ್ಥ ಕಂಡುಕೊಳ್ಳಲಾಗುವುದು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.
ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ನಗರದಲ್ಲಿ ಇತ್ತೀಚಿನ ಮಳೆಯಿಂದಾಗಿ ಕಲುಷಿತ ನೀರು ಸರಬರಾಜಾಗುತ್ತಿರುವ ಬಗ್ಗೆ ಸಾರ್ವಜನಿಕರಿಗೆ ದೂರು ಕೇಳಿಬರುತ್ತಿದೆ. ಈ ಕುರಿತು ಈಗಾಗಲೇ ಜಲಮಂಡಳಿಯವರ ಜೊತೆ ಚರ್ಚಿಸಲಾಗಿದೆ.
ಗಮನಿಸಿ:ಭೋವಿ ಸಮಾಜದ ಹೊಸ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ
ಎರಡನೇ ಹಂತದ ನೀರು ಸರಬರಾಜಿಗೆ ಜಲ ಸಂಗ್ರಹಗಾರಕ್ಕೆ ಭೂಮಿಯನ್ನು ಗುರುತಿಸಲಾಗಿದೆ. ಶೆಟ್ಟಿಹಳ್ಳಿ ಅಭಯಾರಣ್ಯದ ಕಂದಾಯ ಜಾಗವನ್ನು ಗುರುತಿಸಲಾಗಿದೆ. ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಡಾ.ಸೆಲ್ವಮಣಿ ಅವರ ಜೊತೆ ಚರ್ಚಿಸಲಾಗಿದ್ದು, ಈ ಕುರಿತು ಪ್ರಸ್ತಾವನೆಯನ್ನು ಕಳುಹಿಸಿ ಕೊಡುವಂತೆ ಕೋರಿದ್ದಾರೆ.
ಶಿವಮೊಗ್ಗ ನಗರಕ್ಕೆ ಎರಡು ಟಿಎಂಸಿ ನೀರು ಬೇಕಾಗಿದ್ದು, ಈ ಕುರಿತು ನೀರಾವರಿ ಇಲಾಖೆ ಅನುಮತಿ ಪಡೆಯಲಾಗಿದೆ. ಅಭಿವೃದ್ಧಿ ಹೊಂದಿದ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲಾಗುವುದು. ಹಾಲಿ ಇರುವ ನೀರು ಸಂಸ್ಕರಣಾ ಕೇಂದ್ರದಲ್ಲಿ ಫಿಲ್ಟರ್ ಬೆಡ್ಗಳು ಹಾಳಾಗಿದ್ದು ಟೆಂಡರ್ ಕರೆಯಲಾಗಿದೆ.
