HomeಅಪರಾಧNH 369 ಬೈಪಾಸ್ ರಸ್ತೆಯಲ್ಲಿ ಗಾಂಜಾ ಮಾರಾಟ- ಪೊಲೀಸ್ ದಾಳಿ

NH 369 ಬೈಪಾಸ್ ರಸ್ತೆಯಲ್ಲಿ ಗಾಂಜಾ ಮಾರಾಟ- ಪೊಲೀಸ್ ದಾಳಿ

Spread the love

ಶಿವಮೊಗ್ಗ, ಏ.25: ಶಿವಮೊಗ್ಗ ಕಡೆಗೆ ಹೋಗುವ ಎನ್ ಹೆಚ್ 369 ಬೈಪಾಸ್ ರಸ್ತೆಯಲ್ಲಿ ಕಾನೂನು ಬಾಹಿರವಾಗಿ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡಲಾಗುತ್ತಿದ್ದು, ಮಾಹಿತಿ ಪಡೆದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಏ. 24 ರಂದು ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೊಳೆಹೊನ್ನೂರು ಕಡೆಯಿಂದ ಶಿವಮೊಗ್ಗ ಕಡೆಗೆ ಹೋಗುವ ಎನ್ ಹೆಚ್ 369 ಬೈಪಾಸ್ ರಸ್ತೆಯಲ್ಲಿ ಯಾರೋ ಕೆಲವರು ಕಾನೂನು ಬಾಹಿರವಾಗಿ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದರು.

ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹೊಳೆಹೊನ್ನೂರು ಪೊಲೀಸ್ ನಿರೀಕ್ಷಕರು ಶಿವಪ್ರಸಾದ್ ಎಂ ಹಾಗೂ ಸಿಬ್ಬಂದಿಗಳೊಂದಿಗೆ ಪಂಚರ ಸಮಕ್ಷಮ ದಾಳಿ ಮಾಡಿ ಆರೋಪಿತರಾದ 1.ಲವ 24 ವರ್ಷ, 2. ಲೇಖಕ್ 20 ವರ್ಷ ,3. ಮನೋಜ 27ವರ್ಷ, 4 .ಕಿರಣ 24 ವರ್ಷ 5. ಗಿರೀಶ 28 ವರ್ಷ  ಇವರುಗಳನ್ನು ದಸ್ತಗಿರಿ ಮಾಡಿ ಸುಮಾರು 2,34,000/- ರೂ ಮೌಲ್ಯದ 4 ಕೆಜಿ 690ಗ್ರಾಂ ತೂಕದ ಗಾಂಜಾವನ್ನು ಹಾಗೂ ಕೃತ್ಯಕ್ಕೆ ಬಳಸಿದ ಹೊಂಡಾ ಆಕ್ಟೀವಾ ಮೋಟಾರ್ ಸೈಕಲ್ ನ್ನು ಅಮಾನತ್ತು ಪಡಿಸಿಕೊಂಡದ್ದಾರೆ.

ಆರೋಪಿತರ ವಿರುದ್ಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ: 0119/2026 ಕಲಂ: NARCOTIC DRUGS & PSYCHOTROPIC SUBSTANCES ACT, 1985 (U/s-20(b) (ii) B) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments