Homeಜಿಲ್ಲೆಎಸ್‌ಎಸ್‌ಎಲ್‌ಸಿ ಫಲಿತಾಂಶ-ಹೆಚ್.ವಿಶ್ವನಾಥ್ ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್

ಎಸ್‌ಎಸ್‌ಎಲ್‌ಸಿ ಫಲಿತಾಂಶ-ಹೆಚ್.ವಿಶ್ವನಾಥ್ ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್

Spread the love

ಶಿವಮೊಗ್ಗ ,ಏ.28: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಮೂಹಿಕವಾಗಿ ಕಾಪಿ ಮಾಡಲಾಗಿದೆ ಎಂಬ ಮಾಜಿ ಶಿಕ್ಷಣ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿಕೆ ಖಂಡನೀಯವಾದುದು ಎಂದು ವಕೀಲ ಹಾಗೂ ಪೀಪಲ್ಸ್ ಲಾಯರ್ಸ್ ಗೀಲ್ಡ್ ಜಿಲ್ಲಾಧ್ಯಕ್ಷ ಕೆ.ಪಿ.ಶ್ರೀಪಾಲ್ ಹೇಳಿದರು.

ಅವರಿಂದು ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿ, ವಿಶ್ವನಾಥ ಅವರ ಈ ಹೇಳಿಕೆ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ. ಅವರು ಸರ್ಕಾರವನ್ನು ಹೇಗೆ ಬೇಕಾದರೂ ಟೀಕಿಸಲಿ, ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ಹೇಳಲಿ, ನಾವು ಬೇಡ ಎನ್ನುವುದಿಲ್ಲ. ಆದರೆ ಮಕ್ಕಳ ವಿಷಯದಲ್ಲಿ ಈ ರೀತಿಯ ಹೇಳಿಕೆಗಳನ್ನು ನೀಡಿ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರಬಾರದು ಮತ್ತು ಪೋಷಕರಿಗೂ ನೋವುಂಟು ಮಾಡಬಾರದು ಎಂದರು.

ಇವರ ಹೇಳಿಕೆಯಿಂದ ಮಕ್ಕಳ ಮೇಲೆ ತೀವ್ರ ರೀತಿಯ ಪರಿಣಾಮ ಉಂಟಾಗುತ್ತದೆ. ಅಷ್ಟೇ ಅಲ್ಲದೆ ಅವರ ಅತ್ಮಗೌರವಕ್ಕೆ ಪೆಟ್ಟು ನೀಡುತ್ತದೆ. ಆದ್ದರಿಂದ ವಿಶ್ವನಾಥ್ ಅವರು ಇಡೀ ರಾಜ್ಯದ ಮಕ್ಕಳ ಹಾಗೂ ಪೋಷಕರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು:

ಶಿವಮೊಗ್ಗ ನಗರವೂ ಸೇರಿದಂತೆ ಜಿಲ್ಲಾದ್ಯಂತ ಮಾದಕ ವಸ್ತುಗಳ ಬಳಕೆಯಾಗುತ್ತಿದೆ. ಮುಖ್ಯವಾಗಿ ಯುವಕರು ಗಾಂಜಾದಂತಹ ಸೇವನೆಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ನಮ್ಮ ಪೀಪಲ್ಸ್ ಲಾಯರ್ಸ್ ಗೀಲ್ಡ್ ಪದವಿ ಕಾಲೇಜುಗಳ ಸಹಕಾರದಲ್ಲಿ ಕುವೆಂಪು ವಿವಿಯ ಮಾರ್ಗದರ್ಶನದಲ್ಲಿ ಪೊಲೀಸ್ ಇಲಾಖೆ ಹಲವು ಸಂಘ ಸಂಸ್ಥೆಗಳು ವಿವಿಧ ಇಲಾಖೆಗಳನ್ನು ಒಟ್ಟುಗೂಡಿಸಿ ಜಾಗೃತಿ ಮೂಡಿಸಲಾಗುತ್ತಿದೆ. ಈಗಾಗಲೇ ಮಾದಕ ಸೇವನೆಯ ತೊಂದರೆಯ ಕುರಿತು ಪ್ರತೀ ಪದವಿ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಿ ಐದು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ತಿಳಿಸಲಾಗಿದೆ. ಇದರ ಜೊತೆಗೆ ಬೀದಿ ನಾಟಕ ಕಿರುಚಿತ್ರದಂತಹ ಜಾಗೃತಿ ಕಾರ್ಯಕ್ರಮಗಳನ್ನು ಕೂಡಾ ಆಯೋಜಿಸಲಾಗಿದೆ ಎಂದರು.

ಈ ಹಿನ್ನೆಲೆಯಲ್ಲಿ ನಾಳೆ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣ ಕಾಲೇಜಿನ ಸಭಾಂಗಣದಲ್ಲಿ ಬೆ.10.30ಕ್ಕೆ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ಜಿಪಂ ಸಿಇಒ ಕಾರ್ಯಕ್ರಮವನ್ನು ಉದ್ಘಾಟಿಸಿದರೆ ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್ ಹಾಗೂ ಪ್ರಾಂಶುಪಾಲ ಡಾ.ಟಿ.ಅವಿನಾಶ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಜಯ್‌ಕುಮಾರ್, ರಫಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments