Homeಜಿಲ್ಲೆNSUI ಪ್ರತಿಭಟನೆ - ಕುವೆಂಪು ವಿವಿ ಕುಲಪತಿಯ ಕಚೇರಿ ಧ್ವಂಸ

NSUI ಪ್ರತಿಭಟನೆ – ಕುವೆಂಪು ವಿವಿ ಕುಲಪತಿಯ ಕಚೇರಿ ಧ್ವಂಸ

Spread the love

ಶಂಕರಘಟ್ಟ ,ಏ.29 : ಕುವೆಂಪು ವಿವಿ ನಾನಾ ಕಾರಣಗಳಿಂದ ಕಳಂಕವನ್ನು ಹೊತ್ತಿದ್ದು, ಅದರಲ್ಲಿ ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಅಂಕ ಪಟ್ಟಿ ನೀಡದಿರುವುದು ಕೂಡ ಒಂದು. ಇಂತಹ ಅನೇಕ ಕಾರಣಗಳಿಗೆ ಒಳಗೊಂಡಂತೆ ಎನ್ ಎಸ್ ಯು ಐ ಪ್ರತಿಭಟನೆ ನಡೆಸಿದ್ದು, ಕುಲಪತಿಯ ಕಚೇರಿಯನ್ನು ಹಾನಿ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ಇಲ್ಲದಾಗಿದೆ. ಅದರಂತೆ 1, 3 ಮತ್ತು 5 ನೇ ಸೆಮಿಸ್ಟರ್‌ಗಳ ಫಲಿತಾಂಶ ಪ್ರಕಟಿಸಿಲ್ಲ. ಇದಲ್ಲದೇ ಇತ್ತೀಚೆಗೆ ನಡೆದ ಪರೀಕ್ಷೆಗಳ ಮೌಲ್ಯಮಾಪನವನ್ನು ಉಪನ್ಯಾಸಕರಿಗೆ ಮೌಲ್ಯಮಾಪನದ ಗೌರವಧನ ನೀಡದೇ ಇರುವುದರಿಂದ ಉಪನ್ಯಾಸಕರು ಮೌಲ್ಯಮಾಪನವನ್ನು ಬಹಿಷ್ಕರಿಸಿದ್ದಾರೆ.

ಅಲ್ಲದೇ ೩ ವರ್ಷಗಳಿಂದ ಯಾವುದೇ ಪರೀಕ್ಷೆಗಳ ಅಂಕಪಟ್ಟಿಯನ್ನು ವಿತರಿಸದೇ ಅಂಕಪಟ್ಟಿಗಳನ್ನು ಮುದ್ರಿಸಲು ಟೆಂಡರ್ ಕರೆಯುವುದಾಗಿ ಹೇಳುತ್ತಲೇ ಬರಲಾಗುತ್ತಿದೆ. ಇದರಿಂದಾಗಿ ಪದವಿ ಪೂರೈಸಿದ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸಕ್ಕೆ ಹೋಗಲು, ಉದ್ಯೋಗ ಕಂಡುಕೊಳ್ಳಲು ಆಗುತ್ತಿಲ್ಲ. ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಪಾಸಿಂಗ್ ಸರ್ಟಿಫಿಕೇಟ್ ಅಥವಾ ಪದವಿ ಪ್ರಮಾಣ ಪತ್ರ ನೀಡುತ್ತಿಲ್ಲ.

ವಿಶ್ವವಿದ್ಯಾಲಯದ ಆಂತರಿಕ ಕಚ್ಚಾಟದಿಂದಾಗಿ ಕಳೆದೆರಡು ವರ್ಷಗಳಿಂದ ಘಟಿಕೋತ್ಸವ ಸಮಾರಂಭವನ್ನು ಸಹ ಏರ್ಪಡಿಸದೇ ವಿವಿಯ ಮಾನ ಹರಾಜಿಗಿಡಲಾಗಿದೆ. ಕಳೆದ ಬಾರಿ ವಿವಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದ ಫಲಿತಾಂಶ ಸಾಕಷ್ಟು ಗೊಂದಲಕ್ಕೀಡು ಮಾಡಿತ್ತು. ನೂರಾರು ವಿದ್ಯಾರ್ಥಿಗಳ ಫಲಿತಾಂಶ ಒಂದು ಬಾರಿ ಪಾಸ್ ಎಂದು ತೋರಿಸಿದ್ದರೆ ಮತ್ತೊಂದು ಬಾರಿ ಫೇಲ್ ಎಂದು ತೋರಿಸುತ್ತಿತ್ತು. ಇದರಿಂದಾಗಿ ವಿದ್ಯಾರ್ಥಿಗಳು ಗೊಂದಲಕ್ಕೀಡಿ ಆತಂಕಕ್ಕೊಳಗಾಗಿದ್ದಾರೆ.

ಗಮನಿಸಿ: ಮಳೆ ಹಾನಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ: ರೈತರ ಸಂಘ ಮನವಿ

ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಸಾಕಷ್ಟು ಬಡ ಮತ್ತು ಮದ್ಯಮ ವರ್ಗದ ವಿದ್ಯಾರ್ಥಿಗಳು ಓದುತಿದ್ದು ಶುಲ್ಕದ ಹೆಸರಿನಲ್ಲಿ ಏಕಾ ಏಕಿ ಸಾವಿರಾರು ರೂಪಾಯಿ ಪರೀಕ್ಷಾ ಶುಲ್ಕ ಹಾಗು ಪ್ರವೇಶ ಶುಲ್ಕದ ಹೆಸರಿನಲ್ಲಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಂದ ಸುಲಿಗೆಗೆ ಇಳಿದಿರುವುದು ಖಂಡನೀಯ ಕೂಡಲೇ ರಾಜ್ಯಪಾಲರು ಆಂತರಿಕ ಕಚ್ಚಾಟದಲ್ಲಿ ತೊಡಗಿರುವ ಕುಲಪತಿಗಳಿಗೆ. ವಿದ್ಯಾರ್ಥಿಗಳ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಲು ಸೂಚನೆ ನೀಡಿ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಅವ್ಯವಸ್ಥೆ ಸರಿಪಡಿಸಿ, ಅಕ್ರಮಗಳನ್ನು ತಡೆಯುವ ಕೆಲಸವನ್ನು ಮಾಡುವಂತೆ ಎಚ್ಚರಿಕೆ ನೀಡಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ನಡೆದಿರುವ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಬೇಕು. ಪದವಿ ಪ್ರಮಾಣ ಪತ್ರ, ಅಂಕಪಟ್ಟಿ, ಜೆನ್ಯೂಯೆನ್ ಸರ್ಟಿಫಿಕೇಟ್ ವಿತರಣೆ ಮಾಡಬೇಕು. ಏಕಾ ಏಕಿ ಏರಿಸಿರುವ ಸಾವಿರಾರು ರುಪಾಯಿ ಪರೀಕ್ಷಾ ಶುಲ್ಕ ಹಾಗು ಪ್ರವೇಶ ಶುಲ್ಕವನ್ನು ಇಳಿಸಬೇಕು ಎಂದು ಆಗ್ರಹಿಸಿದರು.

ಯು.ಯು.ಸಿ.ಎಮ್.ಎಸ್.ನಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳಿಗೆ ಸೂಕ್ತ ಪರಿಹಾರ ಒದಗೆಸಬೇಕು. ವಿವಿಯಲ್ಲಿನ ತಾಂತ್ರಿಕ ತೊಂದರೆಗಳಿಗೆ ಸರ್ಕಾರವನ್ನು ದೂರದೆ ಸರಿಪಡಿಸುವ ವ್ಯವಸ್ಥೆ ಮಾಡಬೇಕು. 2021-22 ರ ದೂರಶಿಕ್ಷಣ ವಿದ್ಯಾರ್ಥಿಗಳ ಪರೀಕ್ಷೆ ಮತ್ತು ಅಂಕಪಟ್ಟಿ ಹಾಗು ಪಲಿತಾಂಶದ ಬಗ್ಗೆ ಕೂಡಲೆ ಗಮನಹರಿಸಬೇಕು ಎಂದರು.

ವಿವಿ ವ್ಯಾಪ್ತಿಗೊಳಪಡುವ ಎಲ್ಲಾ ಕಾಲೇಜುಗಳಲ್ಲಿ ಹಾಗು ಹಾಸ್ಟೆಲ್‌ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಸರಿಪಡಿಸಬೇಕು. ವಿವಿಯ ಎಲ್ಲಾ ಕಾಲೇಜುಗಳಿಗೆ ಕಂಪ್ಯೂಟರ್ ಹಾಗೂ ಲ್ಯಾಬ್ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಎನ್‌ಎಸ್‌ಯುಐನ ಜಿಲ್ಲಾಧ್ಯಕ್ಷರಾದ  ವಿಜಯ್ ಕಾರ್ಯಧ್ಯಕ್ಷರಾದ ರವಿ ಕಟಿಕೆರೆ ನಗರಾಧ್ಯಕ್ಷರಾದ ರವಿ, ನಗರ ಉಪಾಧ್ಯಕ್ಷರಾದ ಆದಿತ್ಯ, ಸುಭಾನ್, ಪ್ರಧಾನ ಕಾರ್ಯದರ್ಶಿಗಳಾದ ಚಂದ್ರೋಜಿ ರಾವ್, ವರುಣ್ ವಿ ಪಂಡಿತ್ ಮೊದಲಾದವರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments