Homeಜಿಲ್ಲೆಉದ್ಯೋಗಕ್ಕಾಗಿ ನೇರ ಸಂದರ್ಶನ

ಉದ್ಯೋಗಕ್ಕಾಗಿ ನೇರ ಸಂದರ್ಶನ

Spread the love

ಶಿವಮೊಗ್ಗ, ಮೇ.02 : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ.06 ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಗಮನಿಸಿ: ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕೂಡಲೇ ನಿಲ್ಲಿಸಿ

ನೇರ ಸಂದರ್ಶನದಲ್ಲಿ ಎಕ್ಸಿಸ್ ಬ್ಯಾಂಕ್ ಭಾಗವಹಿಸಲಿದ್ದು, ತಮ್ಮಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಯಾವುದೇ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments