Homeಜಿಲ್ಲೆಜನಿವಾರ ಪ್ರಕರಣ- ಆಹೋರಾತ್ರಿ ಧರಣಿ

ಜನಿವಾರ ಪ್ರಕರಣ- ಆಹೋರಾತ್ರಿ ಧರಣಿ

Spread the love

ಶಿವಮೊಗ್ಗ ,ಮೇ.5: ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ಸಮುದಾಯ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು, ಇದನ್ನು ಖಂಡಿಸಿ ಇಂದು ಸಂಜೆ 6 ರಿಂದ ನಾಳೆ ಬೆಳಿಗ್ಗೆ 9 ರ ವರೆಗೆ ಆಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇನೆಂದು ಅಖಿಲ ಕರ್ನಾಟಕ ಸ್ಮಾರ್ಥ ಬ್ರಾಹ್ಮಣ ಸಂಘದ ಜಿಲ್ಲಾ ಅಧ್ಯಕ್ಷ ಹೆಚ್.ಎಸ್.ಗಣೇಶ್ ತಿಳಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆಯಲ್ಲಿ ನಿರಂತರವಾಗಿ ವಿದ್ಯಾರ್ಥಿಯ ಜನಿವಾರ ತೆಗೆಸುವುದು ನಡೆಯುತ್ತಿದೆ. ಇದರ ಬಗ್ಗೆ ದೂರ ದಾಖಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಗಮನಿಸಿ:ಅಣು ವಿದ್ಯುತ್ ಸ್ಥಾವರಕ್ಕೆ ರಾಷ್ಟ್ರಭಕ್ತರ ಬಳಗ ವಿರೋಧ

ಇತ್ತೀಚಿಗೆ ನಡೆದ ಸಿಟಿಇ ಪರೀಕ್ಷೆಯಲ್ಲಿ ನಮ್ಮ ಸಮುದಾಯದ ವಿದ್ಯಾರ್ಥಿಯ ಜನಿವಾರವನ್ನು ಅಲ್ಲಿನ ಸಿಬ್ಬಂದಿಯೊಬ್ಬರು ತೆಗೆದು ನಮ್ಮ ಸಮುದಾಯಕ್ಕೂ ಹಾಗೂ ನಮ್ಮ ಆಚರಣೆಗೂ, ನಮ್ಮ ಧರ್ಮಕ್ಕೂ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದರು.

ಈ ಹಿಂದೆ ಈ ರೀತಿ ಘಟನೆ ನಡೆದಾಗ ಸಂಘ ಹೋರಾಟ ಮಾಡಿ ಕಾನೂನು ರೀತಿ ಕ್ರಮ ಕೈಗೊಳ್ಳಿ ಎಂದು ದೂರು ನೀಡಿದ್ದರೂ ಸಹ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಶಿಕ್ಷಣ ಸಚಿವರ ಮಧು ಬಂಗಾರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ದೂರು ನೀಡುವುದಾಗಿ ಎಚ್ಚರಿಕೆ ನೀಡಿದರು.

ಜನಿವಾರ ತೆಗೆಸಿದ ವ್ಯಕ್ತಿ ವಿರುದ್ಧ ಕಠಿಣಕ್ರಮ ಕೈಗೊಳ್ಳಬೇಕು ಹಾಗೂ ಆತ ಬ್ರಾಹ್ಮಣ ಸಮುದಾಯದ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನ್ಯಾಯವಾದಿ ಶ್ರೀಕಾಂತ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments