Homeಜಿಲ್ಲೆಪಶು ವೈದ್ಯಕೀಯ ವಿಜ್ಞಾನಿಗಳ ಮುಷ್ಕರ ಸ್ಥಳಕ್ಕೆ ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ

ಪಶು ವೈದ್ಯಕೀಯ ವಿಜ್ಞಾನಿಗಳ ಮುಷ್ಕರ ಸ್ಥಳಕ್ಕೆ ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ

Spread the love

ಶಿವಮೊಗ್ಗ,ಮೇ.5 : “ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನೌಕರರಿಗೆ ನೀಡಲಾಗುತ್ತಿದ್ದ ನಾನ್ ಪ್ರಾಕ್ಟಿಸಿಂಗ್ ಭತ್ಯೆಯನ್ನು (NPA) ನಿಲ್ಲಿಸಿರುವ ಸರ್ಕಾರದ ನಡೆ ಖಂಡನೀಯವಾಗಿದ್ದು, ಆದೇಶವನ್ನು ತಕ್ಷಣ ಹಿಂಪಡೆಯಬೇಕು,” ಎಂದು ಶಿವಮೊಗ್ಗನಗರ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಆಗ್ರಹಿಸಿದ್ದಾರೆ.

ಗಮನಿಸಿ:ಮೇ.8 ರಿಂದ ರಾಷ್ಟ್ರೀಯ ವೈದ್ಯಕೀಯ ಸಮ್ಮೇಳನ

ಇಂದು ಶಿಕ್ಷಕರ ಸಂಘದ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಪ್ರತಿಭಟನಾಕಾರರೊಂದಿಗೆ ಸಮಾಲೋಚನೆ ನಡೆಸಿದರು. ಪಶು ವೈದ್ಯಕೀಯ ಮತ್ತುಮೀನುಗಾರಿಕೆ ವಿಜ್ಞಾನಿಗಳು ಎದುರಿಸುತ್ತಿರುವ ತಾಂತ್ರಿಕ ಮತ್ತು ಆರ್ಥಿಕ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಅವರು, “ವಿಜ್ಞಾನಿಗಳು ಮತ್ತು ಶಿಕ್ಷಕರು ಸಮಾಜದ ಬೆನ್ನೆಲುಬು. ಅವರ ಭತ್ಯೆಗಳನ್ನು ಕಡಿತಗೊಳಿಸುವುದು ಅವರ ವೃತ್ತಿ ನಿಷ್ಠೆಗೆ ಮಾಡುವ ಅವಮಾನ. ಸ್ಥಗಿತಗೊಂಡಿರುವ NPA ಅನ್ನು ಕೂಡಲೇ ಬಿಡುಗಡೆ ಮಾಡಲು ಮತ್ತು ಶಿಕ್ಷಕರ ಹಿತರಕ್ಷಣೆಗಾಗಿ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಾಯಿಸಲಾಗುವುದು,” ಎಂದು ತಿಳಿಸಿದರು.

ಮುಷ್ಕರದಲ್ಲಿ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಶಿಕ್ಷಕರು, ವಿಜ್ಞಾನಿಗಳು ಹಾಗೂ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments