Homeಜಿಲ್ಲೆಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಸಾವು

ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಸಾವು

Spread the love

ಶಿವಮೊಗ್ಗ, ಮೇ 07: ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ 45-50 ವಯೋಮಿತಿಯ ವ್ಯಕ್ತಿ ಅಸ್ವಸ್ಥರಾಗಿ ಬಿದ್ದಿದ್ದು, ಸಾರ್ವಜನಿಕರ ಸಹಾಯದಿಂದ ಅಂಬುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದು, ಮೇ 05ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತನಾಗಿರುತ್ತಾನೆ. ವ್ಯಕ್ತಿಯ ಹೆಸರು, ವಿಳಾಸ ಹಾಗೂ ವಾರಸುದಾರರ ಬಗ್ಗೆ ಯಾವುದೇ ಸುಳಿವು ದೊರೆತಿಲ್ಲ.

ಗಮನಿಸಿ:ಕೊಲೆ ಯತ್ನ : ಮೂವ್ವರಿಗೆ ಜೈಲು ಶಿಕ್ಷೆ

ಮೃತ ವ್ಯಕ್ತಿಯ ಚಹರೆ 5 ಅಡಿ ಎತ್ತರ, ದುಂಡು ಮುಖ, ದೃಢಕಾಯ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಮೈಮೇಲೆ ಮೆರೂನ್ ಬಣ್ಣದ ತುಂಬು ತೋಳಿನ ಶರ್ಟ್ ಹಾಗೂ ಕಪ್ಪು ಬಣ್ಣದ ಫಾರ್ಮಲ್ ಪ್ಯಾಂಟ್ ಧರಿಸಿರುತ್ತಾನೆ.

ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಸುಳಿವು ಸಿಕ್ಕಲ್ಲಿ ಕೋಟೆ ಪೊಲೀಸ್ ಠಾಣೆಗೆ ಖುದ್ದಾಗಿ ಅಥವಾ ದೂ.ಸಂ.: 08182-261415 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments