Homeಜಿಲ್ಲೆಉದ್ಯೋಗಕ್ಕಾಗಿ ನೇರ ಸಂದರ್ಶನ

ಉದ್ಯೋಗಕ್ಕಾಗಿ ನೇರ ಸಂದರ್ಶನ

Spread the love

ಶಿವಮೊಗ್ಗ; ಮೇ.08 : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ.11 ಬೆಳಗ್ಗೆ 10ಕ್ಕೆ ಪ್ರತಾಪ್ ಆರ್ಕಿಡ್, 2ನೇ ಮಹಡಿ, ದುರ್ಗಿಗುಡಿ ಜೈಲ್ ಸರ್ಕಲ್, ಡಿಸಿಬಿ ಬ್ಯಾಂಕ್ ಹತ್ತಿರ, ಶಿವಮೊಗ್ಗ ಇಲ್ಲಿನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಗಮನಿಸಿ:ಜಿಲ್ಲಾ ಉಸ್ತುವಾರಿ ಸಚಿವರಿಂದ ಕೋಣಂದೂರು ಲಿಂಗಪ್ಪನವರ ಭೇಟಿ-ಅಭಿನಂದನೆ

ನೇರ ಸಂದರ್ಶನದಲ್ಲಿ ರೇಜ್ ಮ್ಯಾನೇಜ್ಮೆಂಟ್ ಸಲ್ಯೂಷನ್ ಕಂಪನಿ ಭಾಗವಹಿಸಲಿದ್ದು, ತಮ್ಮಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಪಿಯುಸಿ ಮತ್ತು ಯಾವುದೇ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments