ಶಿವಮೊಗ್ಗ, ಮೇ.10: 15 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 20 ವರ್ಷ ಕಠಿಣ ಸಜೆ ನೀಡಿ ನ್ಯಾಯಾಲಯ ಆದೇಶಿಸಿದೆ.
2022ನೇ ಸಾಲಿನಲ್ಲಿ ಭದ್ರಾವತಿಯ ವಾಸಿ 22 ವರ್ಷದ ಯುವಕನು, 15 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ಆಗಿನ ತನಿಖಾಧಿಕಾರಿಯಾದ ಎಎಸ್ಐ ಜೀತೇಂದ್ರಕುಮಾರ್ ದಯಾಮ ರವರು ಪ್ರಕರಣದತನಿಖೆ ಪೂರೈಸಿ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.
ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರು ಶ್ರೀಧರ್ ವಾದ ಮಂಡಿಸಿದ್ದು, ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-1) ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತನ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ನಿಂಗನಗೌಡ ಪಾಟೀಲ್ ರವರು ದಿನಾಂಕ: 08-05-2026 ರಂದು ಆರೋಪಿತನಿಗೆ 20 ವರ್ಷ ಕಠಿಣ ಸಜೆಮತ್ತು 2,50,000 ರೂ ದಂಡವನ್ನು ವಿಧಿಸಿ, ನೊಂದ ಬಾಲಕಿಗೆ 2,25,000/- ರೂ ಪರಿಹಾರವನ್ನು ನೀಡಿ ಆದೇಶಿಸಿರುತ್ತಾರೆ
