ಶಿವಮೊಗ್ಗ,ಮೇ.11: ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕಣಸೋಗಿ ಗ್ರಾಮದ ಬಲವೀಂದ್ರಪ್ಪ ಎಂಬುವವರ ಪತ್ನಿ 30 ವರ್ಷದ ದೀಪಾ ಎಂಬ ಮಹಿಳೆ ಜನವರಿ 2026 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ.
ಈಕೆಯ ಚಹರೆ 5.00 ಅಡಿ ಎತ್ತರ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ ಹೊಂದಿದ್ದು, ಕನ್ನಡ ಭಾಷೆ ಮಾತಾನಾಡುತ್ತಾರೆ. ಮನೆಯಿಂದ ಹೋಗುವಾಗ ಹಸಿರು ಬಣ್ಣದ ಸೀರೆ ಧರಿಸಿರುತ್ತಾರೆ. ಈಮಹಿಳೆಯ ಕುರಿತು ಸುಳಿವು ಸಿಕ್ಕಲ್ಲಿ ಶಿರಾಳಕೊಪ್ಪ ಪೊಲೀಸ್ ಠಾಣೆ ದೂ.ಸಂ.: 8722983310/ 9480803367 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
