ಶಿವಮೊಗ್ಗ; ಮೇ.12 : ಆನವಟ್ಟಿ ಪಟ್ಟಣ ಪಂಚಾಯಿತಿ ಕಾರ್ಯಾಲಯವು 2026-27ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಶೇ. 5 ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ಮೇ 31 ರವರೆಗೆ ವಿಸ್ತರಿಸಿದ್ದು, ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
