ಶಿವಮೊಗ್ಗ, ಮೇ 12: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿರುವ ‘ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ‘ (ಕೆಎಸ್ ಟಿಎ)ವತಿಯಿಂದ “ಸುಧಾರಿತ ದತ್ತಾಂಶ ವಿಜ್ಞಾನ, ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ” (Advanced Data Science, Artificial Intelligence & Machine Learning) ಎಂಬ ವಿಷಯದ ಕುರಿತು ಮೂರು ದಿನಗಳ ವಿಶೇಷ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಾಗಾರದ ವಿವರಗಳು:
ಮೇ 18 ರಿಂದ ಮೇ 20 ರವರೆಗೆ, ಅಕಾಡೆಮಿಯ ಕಚೇರಿ, ಪ್ರೊ. ಯು.ಆರ್. ರಾವ್ ವಿಜ್ಞಾನ ಭವನ, ಬನಶಂಕರಿ 2 ನೇ ಹಂತ, ಬೆಂಗಳೂರು ಇಲ್ಲಿ ಕಾರ್ಯಾಗಾರ ನಡೆಯಲಿದ್ದು, ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಮತ್ತು ತಂತ್ರಜ್ಞರು ಈ ಕಾರ್ಯಾಗಾರದಲ್ಲಿ ಉಪನ್ಯಾಸ ನೀಡಲಿದ್ದಾರೆ.
ಗಮನಿಸಿ:ನೀಟ್- ಯುಜಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ: ಎನ್ ರಮೇಶ್
ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳಲ್ಲಿ ಆಸಕ್ತಿ ಇರುವ ಪ್ರತಿನಿಧಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಲು ಅವಕಾಶವಿದೆ.
ಆಸಕ್ತರು ಗೂಗಲ್ ಫಾರ್ಮ್ https://forms.gle/Dyf9KFQ85hnRLDHH6) ಮೂಲಕ ಮೇ 16 ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿ ಕೋರಲಾಗಿದೆ.
ಕಾರ್ಯಾಗಾರದ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಯೋಜಕರಾದ ಶ್ರೀನಿವಾಸು ವಿ.ಕೆ., ಮೊಬೈಲ್: 9620767819 ಅವರನ್ನು ಸಂಪರ್ಕಿಸಬಹುದು ಅಥವಾ ಅಕಾಡೆಮಿಯ ಅಧಿಕೃತ ವೆಬ್ಸೈಟ್ https://kstacademy.in ವೀಕ್ಷಿಸಬಹುದು ಎಂದು ಅಕಾಡೆಮಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಡಾ. ಆನಂದ್ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
