Homeಜಿಲ್ಲೆಬಿಜೆಪಿ ಮುಖಂಡನಿಂದಲ್ಲೆ ಪ್ರಶ್ನೆ ಪತ್ರಿಕೆ ಸೋರಿಕೆ- ಪಾರದರ್ಶಕತೆ ಕಾಪಾಡುವಲ್ಲಿ ಕೇಂದ್ರ ವಿಫಲ: ಎನ್‌ಎಸ್‌ಯುಐ

ಬಿಜೆಪಿ ಮುಖಂಡನಿಂದಲ್ಲೆ ಪ್ರಶ್ನೆ ಪತ್ರಿಕೆ ಸೋರಿಕೆ- ಪಾರದರ್ಶಕತೆ ಕಾಪಾಡುವಲ್ಲಿ ಕೇಂದ್ರ ವಿಫಲ: ಎನ್‌ಎಸ್‌ಯುಐ

Spread the love

ಶಿವಮೊಗ್ಗ, ಮೇ.14: ನೀಟ್-ಯುಜಿ 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ರಾಜಸ್ಥಾನದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತನ ಮೂಲಕವೇ ಸೋರಿಕೆಯಾಗಿದೆ. ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಪಾಡಲು ವಿಫಲವಾಗಿರುವ ಕಾರಣ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ಕೇಂದ್ರ ಬಿಜೆಪಿ ಸರ್ಕಾರ ಒಪ್ಪಿಕೊಂಡು ಪರೀಕ್ಷೆಯನ್ನು ರದ್ದು ಮಾಡಿದೆ . ಈ ಹಿನ್ನೆಲೆಯಲ್ಲಿ ಗುರುವಾರ ಎನ್.ಎಸ್.ಯು.ಐ. ಸಂಘಟನೆ ನಗರದ ಮಹಾವೀರ ವೃತ್ತದಲ್ಲಿ ರಸ್ತೆ ತಡೆ ಹಾಗೂ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ರಾಷ್ಟ್ರಪತಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿತು.

ಗ್ರಾಮೀಣ, ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ತಮ್ಮ ಕುಟುಂಬದ ಆರ್ಥಿಕ ಸಂಕಷ್ಟಗಳ ನಡುವೆಯೂ ವಿದ್ಯಾಭ್ಯಾಸಕ್ಕಾಗಿ ಕಷ್ಟ ಪಡುತ್ತಿದ್ದರೂ ಕೂಡ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಕನಸು ಕಂಡು ಅನೇಕ ವರ್ಷಗಳ ಕಾಲ ಹಗಲು-ರಾತ್ರಿ ಎನ್ನದೆ ಓದುತ್ತಿದ್ದಾರೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ಪ್ರಶ್ನೆ ಪತ್ರಿಕೆಗಳ ಭದ್ರತೆಯ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಕಾರಣ ಪ್ರತಿಕೆ ಸೋರಿಕೆ ಆಗಿದೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನಲ್ಲದೇ ಪೋಷಕರ ನಂಬಿಕೆ ಮತ್ತು ವಿಶ್ವಾಸವನ್ನೇ ಕೇಂದ್ರ ಬಿಜೆಪಿ ಸರ್ಕಾರ ಹಾಳು ಮಾಡಿದೆ ಎಂದು ಜಿಲ್ಲಾ ಎನ್‌ಎಸ್‌ಯುಐ ಆಕ್ರೋಶ ವ್ಯಕ್ತಪಡಿಸಿದರು.

ದೇಶದಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶದಲ್ಲಿ ಪಾರದರ್ಶಕತೆ, ಸಮಾನ ಅವಕಾಶ ಹಾಗೂ ಮೆರಿಟ್ ಆಧಾರಿತ ಪ್ರವೇಶ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ 2012 ರಲ್ಲಿ ನೀಟ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದರು. ಆದರೆ ಈಗ ಇದನ್ನು ಕೇಂದ್ರ ಬಿಜೆಪಿ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ.

ಗಮನಿಸಿ: ವನ್ಯಜೀವಿಗಳೊಂದಿಗೆ ಸಹಬಾಳ್ವೆ ಅನಿವಾರ್ಯ: ಕುಮಾರ್ ಪುಷ್ಕರ್

ಕೇಂದ್ರ ಬಿಜೆಪಿ ಸರ್ಕಾರದ ಆಡಳಿತದಿಂದ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು, ಕೋಚಿಂಗ್ ಮಾಫಿಯಾ, ಪರೀಕ್ಷಾ ಅಕ್ರಮ ಮತ್ತು ಹಣದ ಪ್ರಭಾವದಿಂದ ತನ್ನ ಮೂಲ ಉದ್ದೇಶವನ್ನೇ ಕಳೆದುಕೊಳ್ಳುತ್ತಿರುವಂತಾಗಿದೆ. 2024 ರಲ್ಲಿಯೂ ನೀಟ್-ಯುಜಿ ಕುರಿತು ಪ್ರಶ್ನೆ ಪತ್ರಿಕೆ ವಿವಾದ ದೇಶಾದ್ಯಂತ ಕೇಳಿ ಬಂದಿದ್ದರೂ ಸಹ ಈ ವಿಷಯನ್ನು ಕೇಂದ್ರ ಸರ್ಕಾರ ಮುಚ್ಚಿ ಹಾಕಿತು ಆದರೂ ವಿದ್ಯಾರ್ಥಿಗಳಲ್ಲಿ ಈವರೆಗೂ ಸಂಪೂರ್ಣ ವಿಶ್ವಾಸ ಮರು ಸ್ಥಾಪನೆಯಾಗಿಲ್ಲ.

ರಾಷ್ಟ್ರಮಟ್ಟದ ಪರೀಕ್ಷೆಯ ಭದ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದ್ದು, ಈ ಬೇಜಾವಾಬ್ದಾರಿ ಕೇಂದ್ರ ಸರ್ಕಾರವನ್ನು ಈ ಕೂಡಲೇ ವಜಾಗೊಳಿಸಿ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಮತ್ತು ಸಾರ್ವಜನಿಕರಲ್ಲಿ ವಿಶ್ವಾಸ ಮೂಡುವಂತೆ ಮಾಡಲು ಈ ಮೂಲಕ ಗೌರವಪೂರ್ವಕವಾಗಿ ಕೋರಿ ಸಾವಿರಾರು ವಿದ್ಯಾರ್ಥಿಗಳ ಸಮ್ಮುಖದಲ್ಲಿ 2026 ರ ನೀಟ್ ಪ್ರಶ್ನೆ ಪತ್ರಿಕೆಯನ್ನು ಹರಿದು ಹಾಕುವ ಮುಖಾಂತರ ಆಕ್ರೋಶವನ್ನು ವ್ಯಕ್ತಪಡಿಸಲಾಯಿತು.

ಈ ಸಂದರ್ಭದಲ್ಲಿ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯಕುಮಾರ್, ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ನಗರಧ್ಯಕ್ಷ ರವಿಕುಮಾರ್, ಪ್ರಮುಖರಾದ ಚಂದ್ರೋಜಿ ರಾವ್, ಆದಿತ್ಯ, ಸುಭಾನ್, ವರುಣ್, ಅಭಿಷೇಕ್, ಯೂಸಫ್, ಅಲಾನ್, ಆಕಾಶ್, ಹಾಲಸ್ವಾಮಿ, ಶಂಕರ್, ಶ್ರೀಕಾಂತ್, ಸೃಜನ್, ಲೋಹಿತ್ ಮತ್ತಿತರರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments