Homeಜಿಲ್ಲೆಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Spread the love

ಶಿವಮೊಗ್ಗ; ಮೇ.15 : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 2026-27 ನೇ ಸಾಲಿಗೆ ಶಿವಮೊಗ್ಗ ನಗರದಲ್ಲಿ ಹೊಸದಾಗಿ ಅಲ್ಪ ಸಂಖ್ಯಾತರ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಮಹಿಳಾ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಿದ್ದು, ಕಾಲೇಜುಗಳಿಗೆ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಗಮನಿಸಿ: ಮುಖ್ಯ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲುಗಡೆಗೆ- ವಾಹನ ಸಂಚಾರಕ್ಕೆ ಅಡಚಣೆ

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5 ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ಇಲ್ಲಿಗೆ ತಮ್ಮ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಮೇ 25 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-220206 ನ್ನು ಸಂಪರ್ಕಿಸುವುದು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments