ಶಿವಮೊಗ್ಗ, ಮೇ 16: ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2026 ನೇ ಸಾಲಿನ ಕೇಂದ್ರ ಸರ್ಕಾರದ ಪ್ರತಿಷ್ಠಿತ “ಪದ್ಮ ವಿಭೂಷಣ“, “ಪದ್ಮ ಭೂಷಣ” ಮತ್ತು “ಪದ್ಮಶ್ರೀ” ಪ್ರಶಸ್ತಿಗಳ ನಾಮ ನಿರ್ದೇಶನಕ್ಕಾಗಿ ಅರ್ಹ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕಲೆ, ಸಮಾಜ ಸೇವೆ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ವ್ಯಾಪಾರ ಮತ್ತುಕೈಗಾರಿಕೆ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ನಾಗರಿಕ ಸೇವೆ, ಕ್ರೀಡೆ, ವನ್ಯಜೀವಿ ಸಂರಕ್ಷಣೆ, ಅಥ್ಲೆಟಿಕ್, ಸಾಹಸ ಕ್ರೀಡೆ, ಪರಿಸರ ಸಂರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿ ಅಸಾಧಾರಣ ಮತ್ತು ವಿಶಿಷ್ಟ ಸೇವೆ ಸಲ್ಲಿಸಿದ ಸಾಧಕರು ಅರ್ಜಿ ಸಲ್ಲಿಸಬಹುದಾಗಿದೆ.
ಗಮನಿಸಿ: ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಸಾಧಕರು ತಮ್ಮ ಸ್ವ–ವಿವರಗಳೊಂದಿಗೆ ಸಾಧನೆಯ ದಾಖಲೆಗಳನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸಿದ್ದಪಡಿಸಿ ಅರ್ಜಿಗಳನ್ನು kanbhavblr@gmail.com ಮತ್ತು dkc.shivamogga@gmail.com ಇಮೇಲ್ ವಿಳಾಸಗಳಿಗೆ ಕಳುಹಿಸಿಕೊಡಬೇಕಾಗಿ ವಿನಂತಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು 10.06.2026 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 08182-223354 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್ ತಿಳಿಸಿದ್ದಾರೆ.
