Homeರಾಜ್ಯಮೋದಿ ದರ್ಬಾರಿನಲ್ಲಿ ಅಂಬಾನಿ, ಅದಾನಿಗೆ ಮಾತ್ರ ಲಾಭ: ಸಿಎಂ ಕಿಡಿ

ಮೋದಿ ದರ್ಬಾರಿನಲ್ಲಿ ಅಂಬಾನಿ, ಅದಾನಿಗೆ ಮಾತ್ರ ಲಾಭ: ಸಿಎಂ ಕಿಡಿ

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ, ಮೇ.19

35 ವರ್ಷಗಳಿಂದ ಗುಜರಾತ್ ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಇಲ್ಲಿ ಅಭಿವೃದ್ಧಿಯೇ ಆಗಿಲ್ಲ. ಮೊನ್ನೆಯಷ್ಟೆ ಕೇವಲ 2500 ರೂ ಮನೆ ಬಾಡಿಗೆ ಕಟ್ಟಲಾಗದ ಕಾರಣಕ್ಕೆ ಬಾಡಿಗೆಗಿದ್ದ ಬಡ ಕುಟುಂಬದ 13 ವರ್ಷದ ಮಗಳ ಮೇಲೆ ಮನೆ ಮಾಲೀಕ ಅತ್ಯಾಚಾರ ಎಸಗಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಇದು ನಿಜವಾದ ಗುಜರಾತ್ ಮಾದರಿ. ಕರ್ನಾಟಕ ಮಾದರಿ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಟೊಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಮಂಗಳವಾರ ತುಮಕೂರಿನ ಸಮಾವೇಶದಲ್ಲಿ ಅವರು ಮಾತನಾಡಿ, ಮೋದಿಯವರು ಪ್ರಧಾನಿ ಆಗುವ ಮೊದಲು ದೇಶದಲ್ಲಿ ಡೀಸೆಲ್, ಪೆಟ್ರೋಲ್, ಚಿನ್ನದ ಬೆಲೆ ಎಷ್ಟಿತ್ತು. ಈಗ ಅದು ಆಕಾಶಕ್ಕೆ ಏರಿದೆ. ಟ್ರಂಪ್ ಬಾಲ ಹಿಡಿದು ಸುತ್ತುತ್ತಿದ್ದ ಮೋದಿಯವರೇ ಈ ಬೆಲೆ ಏರಿಕೆಗೆ ಕಾರಣ. ಮೋದಿ ದರ್ಬಾರಿನಲ್ಲಿ ಅಂಬಾನಿ ಮತ್ತು ಅದಾನಿ ಮಾತ್ರ ಲಾಭ ಮಾಡಿಕೊಂಡು ಈಗ ಇವರ ಆಸ್ತಿ 8 ಲಕ್ಷ ಕೋಟಿಗೆ ಏರಿಕೆಯಾಗಿದೆ. ಬಡವರು ಮತ್ತು ಮಧ್ಯಮ ವರ್ಗದವರ ಆದಾಯ ಮತ್ತು ಬದುಕು ನೆಲಕಚ್ಚಿದೆ. ಮೋದಿ ಮೋದಿ ಎಂದು ಕುಣಿಯುತ್ತಿದ್ದ ಭಾರತದ ಬಡ ಜನರು ಮತ್ತು ಮಧ್ಯಮ ವರ್ಗದವರಿಗೆ ಭ್ರಮನಿರಸನವಾಗಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments