Homeಜಿಲ್ಲೆಜೂ.1 ರಂದು ಕೆಪಿಎಸ್ ಶಾಲೆಗೆ ಶಿವಮೊಗ್ಗದಿಂದಲೇ ಚಾಲನೆ: ಸಿದ್ದರಾಮಯ್ಯ

ಜೂ.1 ರಂದು ಕೆಪಿಎಸ್ ಶಾಲೆಗೆ ಶಿವಮೊಗ್ಗದಿಂದಲೇ ಚಾಲನೆ: ಸಿದ್ದರಾಮಯ್ಯ

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ, ಮೇ.20

ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಯೋಜನೆಗೆ ಶಿವಮೊಗ್ಗದಿಂದಲೇ ಚಾಲನೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬುಧವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಷಯಗಳ ಕುರಿತು ನಡೆಸಿದ ಸಭೆಯಲ್ಲಿ ಅವರು ಮಾಹಿತಿ ನೀಡಿದರು.

ಗಮನಿಸಿ: ಅಯ್ಯೋಯ್ಯೋ ಬೇಡ್ವೇ ಬೇಡ ಅಣುಸ್ಥಾವ್ರ ಯೋಜ್ನೆ……. ಏಸೂರು ಕೊಟ್ರೂ ಬೇಸೂರು ಕೊಡೆವು!

ಒಂದು ಕೆಪಿಎಸ್ ಶಾಲೆಯಲ್ಲಿ 1200 ಮಕ್ಕಳಿಗೆ ಪ್ರವೇಶಾವಕಾಶ ಸಿಗಲಿದ್ದು, ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಕಡೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯಲಿದೆ. ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ 800 ಶಾಲೆಗಳು ಸಂಪೂರ್ಣವಾಗಿ ಸಿದ್ಧವಾಗಬೇಕು ಎಂದು ಸೂಚಿಸಿದರು.


ಈ ವರ್ಷ 800 ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆರಂಭಿಸಲು ಟೆಂಡರ್ ಪ್ರಕ್ರಿಯೆ ಆದಷ್ಟು ಬೇಗನೆ ಪ್ರಾರಂಭಿಸಲಿದ್ದು, ಕೆಪಿಎಸ್ ಶಾಲೆಗಳಿಗೆ ಶಾಲಾ ಬಸ್ ವ್ಯವಸ್ಥೆ ಸೌಲಭ್ಯವನ್ನು ಕಲ್ಪಸುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಈ ವೇಳೆ 15 ಸಾವಿರ ಶಿಕ್ಷಕರನ್ನು ಭರ್ತಿ ಮಾಡುವ ಕುರಿತು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ತಕ್ಷಣ ಸಲ್ಲಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments