ಶಿವಮೊಗ್ಗ ಟೆಲೆಕ್ಸ್ ಸುದ್ದಿ, ಮೇ.21
ಸಿಇಟಿ ಮೂಲಕ ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆಯನ್ನು ನಡೆಸುವ ಅವಕಾಶವನ್ನು ರಾಜಗಯಗಳಿಗೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.
ಗುರುವಾರ ಅವರು ಫ್ರೀಡಂ ಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದರು.
ನೀಟ್ ಪರೀಕ್ಷೆಯ ಪ್ರಶ್ನೆ ಸೋರಿಕೆಯಾಗಿದ್ದು, ಧರ್ಮೇಂದ್ರ ಪ್ರಧಾನ್ ಅವರು ನೀಟ್ ಪರೀಕ್ಷೆಗೆ ಮತ್ತೊಂದು ದಿನಾಂಕ ನಿಗದಿ ಮಾಡಿ ಕೈ ತೊಳೆದುಕೊಂಡಿದ್ದಾರೆ. ಆದರೆ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಲು ನೇರ ಕಾರಣ ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಈ ಜವಾಬ್ದಾರಿಯನ್ನು ಹೊರಬೇಕು ಎಂದರು.
ಗಮನಿಸಿ: ಜಿಂಕೆ ಜಾತಿಗೆ ಸೇರಿದ ಪ್ರಾಣಿ ಬೇಟೆ; ಮೂವರ ಬಂಧನ
ಸಿಇ ಟಿ ಪರೀಕ್ಷೆ ಪಾರದರ್ಶಕವಾಗಿತ್ತು:
ಕರ್ನಾಟಕ ಮತ್ತಿತರೆ ರಾಜ್ಯಗಳಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಬಯಸುವವರಿಗೆ ಸಿಇಟಿ ಪರೀಕ್ಷೆ ಪಾರದರ್ಶಕವಾಗಿ ನಡೆಯುತ್ತಿತ್ತು. ನರೇಂದ್ರ ಮೋದಿಯವರು 2014 ರಲ್ಲಿ ಪ್ರಧಾನಿಗಳಾದ ನಂತರ ಹಿಂದೆ ಇದ್ದ ಪದ್ಧತಿಯನ್ನು ಬದಲಾಯಿಸಿ 2016 ರಲ್ಲಿ ನೀಟ್ ಪರೀಕ್ಷೆಯನ್ನು ಜಾರಿಗೆ ತಂದರು. ಹತ್ತು ವರ್ಷಗಳಲ್ಲಿ ಐದು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ನೀಟ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಒಂದು ವರ್ಷದಿಂದ ತಯಾರಿ ಮಾಡಿಕೊಂಡಿರುತ್ತಾರೆ. ಅನೇಕರು ಕೋಚಿಂಗ್ ಸೆಂಟರ್ ಗಳಲ್ಲಿ ತರಬೇತಿ ಪಡೆಯಲು ಸಾವಿರಾರು ರೂ ವೆಚ್ಚ ಮಾಡಿರುತ್ತಾರೆ. ಹಣವಿದ್ದವರು ಕೋಚಿಂಗ್ ಪಡೆಯುತ್ತಾರೆ, ಹಣ ಇಲ್ಲದ ಬಡವರು, ಗ್ರಾಮೀಣ ಪ್ರದೇಶದ ಮಕ್ಕಳು ಕೋಚಿಂಗ್ ಪಡೆಯಲಾಗುವುದಿಲ್ಲ. ಹಾಗಾಗಿ ಇನ್ನು ಮುಂದೆ ಕೇಂದ್ರ ಸರ್ಕಾರ ನೀಟ್ ಪರೀಕ್ಷೆಗಳನ್ನು ನಡೆಸದೇ, ಈ ಜವಾಬ್ದಾರಿಯನ್ನು ಆಯಾ ರಾಜ್ಯಗಳಿಗೆ ಪರೀಕ್ಷೆ ನಡೆಸುವ ಅಧಿಕಾರವನ್ನು ಕೊಡಬೇಕೆನ್ನುವ ಎಂದು ಒತ್ತಾಯಿಸಿದರು.
