Homeಜಿಲ್ಲೆಕೆ.ಎಚ್. ಮುನಿಯಪ್ಪರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ: ಡಾ.ಶ್ರೀನಿವಾಸ ಕರಿಯಣ್ಣ ಅಗ್ರಹ

ಕೆ.ಎಚ್. ಮುನಿಯಪ್ಪರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ: ಡಾ.ಶ್ರೀನಿವಾಸ ಕರಿಯಣ್ಣ ಅಗ್ರಹ

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ, ಮೇ 28

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಸತತ ಏಳು ಬಾರಿ ಸಂಸತ್ ಸದಸ್ಯರಾಗಿ, ಕೇಂದ್ರ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿರುವ, ದಲಿತ ಸಮುದಾಯದ ಹಿರಿಯ ನಾಯಕರಾದ ಕೆ.ಎಚ್. ಮುನಿಯಪ್ಪ ಅವರನ್ನು ಕರ್ನಾಟಕ ಸರ್ಕಾರದ ನೂತನ ಉಪ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಬೇಕೆಂದು ಶಿವಮೊಗ್ಗ ಗ್ರಾಮಂತರ ಕೇತ್ರದಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ಮುಖಂಡ ಡಾ.ಶ್ರೀನಿವಾಸ ಕರಿಯಣ್ಣ ಕ್ರಾಂಗ್ರೆಸ್ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.

ಮುನಿಯಪ್ಪ ಅವರು 7 ಬಾರಿ ಲೋಕಸಭೆಗೆ ಆಯ್ಕೆಯಾಗಿ, ಕೇಂದ್ರದಲ್ಲಿ ಪ್ರಮುಖ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದ ಆಡಳಿತಾತ್ಮಕ ಅನುಭವ ಹೊಂದಿದ್ದಾರೆ. ದಲಿತ ಸಮುದಾಯದ ಧ್ವನಿಯಾಗಿದ್ದಾರೆ, ದಶಕಗಳಿಂದ ಶೋಷಿತ ಸಮುದಾಯಗಳ ಹಕ್ಕುಗಳಿಗಾಗಿ ನಿರಂತರ ಹೋರಾಟ ಮಾಡಿ, ಸಾಮಾಜಿಕ ನ್ಯಾಯದ ಪರವಾಗಿ ನಿಂತ ನಾಯಕರಾಗಿದ್ದಾರೆ.

ಗಮನಿಸಿ: ಸೈದ್ದಾಂತಿಕ ರಾಜಕಾರಣಕ್ಕೆ ಕೊನೆಯ ಮೊಳೆ

ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಸಂಪೂರ್ಣ ಜೀವನವನ್ನೇ ಮುಡಿಪಾಗಿಟ್ಟು, ಪಕ್ಷ ಸಂಘಟನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಕೇಂದ್ರ ಸಚಿವರಾಗಿದ್ದಾಗ ಕರ್ನಾಟಕಕ್ಕೆ ಹಲವಾರು ಯೋಜನೆಗಳನ್ನು ತಂದು, ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ ಅದ್ದರಿಂದ ಅವರಿಗೆ ಉಪ ಮುಖ್ಯ ಮಂತ್ರಿ ಸ್ಥಾನ ನೀಡ ಬೇಕು ಎಂದು ಅವರು ಅಗ್ರಹಿದ್ದಾರೆ.

ಸಾಮಾಜಿಕ ನ್ಯಾಯದ ಬದ್ಧತೆಯನ್ನು ಎತ್ತಿ ಹಿಡಿಯುವ ಕಾಂಗ್ರೆಸ್ ಪಕ್ಷವು, ಹಿರಿಯ ದಲಿತ ನಾಯಕರಾದ ಮುನಿಯಪ್ಪ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ರಾಜ್ಯದ ದಲಿತ, ಹಿಂದುಳಿದ ಹಾಗೂ ಶೋಷಿತ ವರ್ಗಗಳಿಗೆ ಸರಿಯಾದ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಕಾಂಗ್ರೆಸ್‌ನ ರಾಷ್ಟç ಮತ್ತು ರಾಜ್ಯಗಳ ಮುಖಂಡರಲ್ಲಿ ಶ್ರೀನಿವಾಸ ಕರಿಯಣ್ಣ ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments