ಶಿವಮೊಗ್ಗ ಟೆಲೆಕ್ಸ್ ಸುದ್ದಿ, ಜೂ.6
ಅವಧಿ ಮುಗಿದಿರುವ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ಗೆ ವಿಳಂಬ ಧೋರಣೆ ಅನುಸರಿಸುತ್ತಿರುವುದಕ್ಕೆ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಕ್ಷಮೆ ಯಾಚಿಸಿದೆ.
ಜಿಲ್ಲಾ ಪಂಚಾಯಿತಿ,ತಾಲ್ಲೂಕು ಪಂಚಾಯಿತಿಗಳ ಚುನಾವಣೆ ನಡೆಸಲು ಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ ಎಂಬುದರ ಕುರಿತು ವಿಚಾರಣೆ ವೇಳೆ ಸರ್ಕಾರ ನ್ಯಾಯಾಲಯದ ಕ್ಷಮೆ ಕೋರಿದ್ದು 8 ವಾರಗಳಲ್ಲಿ ಮೀಸಲಾತಿ ವರ್ಗೀಕರಣ ಕೆಲಸ ಪೂರೈಸುವುದಾಗಿ ಪ್ರಮಾಣ ಪತ್ರ ಸಲಿಸಿತು.
ಗಮನಿಸಿ: ವಾಹನ ಸವಾರರಿಗೆ ಸುವರ್ಣಾವಕಾಶ: ದಂಡ ಪಾವತಿಗೆ ರಿಯಾಯಿತಿ
ಇದೇ ಸಂದರ್ಭದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಅವಧಿ ಮುಗಿದು ಮೂರು ವರ್ಷಗಳೇ ಕಳೆಯುತ್ತಾ ಬಂದಿದ್ದು, ಶೀಘ್ರ ಚುನಾವಣೆ ನಡೆಸುವಂತೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ ಈ ಕಾಂತೇಶ ಅವರು ಸಲ್ಲಿಸಿದ್ದ ರಿಟ್ ಅರ್ಜಿ ಬಗ್ಗೆಯೂ ಕಾಂತೇಶ ಪರ ವಕೀಲರಾದ ವಿನೋದ್ ಕುಮಾರ್ ಅವರು ಹೈಕೋರ್ಟ್ ನ್ಯಾಯ ಪೀಠದ ಗಮನ ಸೆಳೆದರು.
ಈ ಅರ್ಜಿಯ ವಿಚಾರಣೆಯನ್ನು ಜುಲೈ 10 ಕ್ಕೆ ಕೈಗೊಳ್ಳುವುದಾಗಿ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರುಅವರ ವಿಭಾಗೀಯ ಪೀಠ ವಿಚಾರಣೆಯನ್ನು ಮುಂದೂಡಿತು.
