Homeಜಿಲ್ಲೆಸಂಚರಿಸುತ್ತಿದ್ದ ದುರ್ಗಾಂಬ ಬಸ್‌ನಲ್ಲಿ ಬೆಂಕಿ: ಪ್ರಯಾಣಿಕರು ಬಚಾವ್!!

ಸಂಚರಿಸುತ್ತಿದ್ದ ದುರ್ಗಾಂಬ ಬಸ್‌ನಲ್ಲಿ ಬೆಂಕಿ: ಪ್ರಯಾಣಿಕರು ಬಚಾವ್!!

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ, ಜೂ.6

ಹೊಸನಗರದ ಶಿವಮೊಗ್ಗ-ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಸಂಚರಿಸುತ್ತಿದ್ದ ಶ್ರೀ ದುರ್ಗಾಂಬ ಸಂಸ್ಥೆಯ ಬಸ್‌ಗೆ ಬೆಂಕಿ ಕಾಣಿಸಿಕೊಂಡ ಘಟನೆ ಶನಿವಾರ ನಡೆದಿದೆ.

ಗಮನಿಸಿ: ಮಹಾನಗರ ಪಾಲಿಕೆಗೆ ಚುನಾವಣೆ ಜುಲೈ 10 ಕ್ಕೆ ಹೈಕೋರ್ಟ್ ವಿಚಾರಣೆ.

ಆದೃಷ್ಟವಶಾತ್, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಸುರಕ್ಷಿತವಾಗಿ ಹೊರ ಬಂದಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಪ್ರಕರಣ ವರದಿಯಾಗಿಲ್ಲ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಮೊದಲು ಬಸ್‌ನಿಂದ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ವ್ಯಾಪಿಸಿದೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ದೊರೆಯುವ ಸಾಧ್ಯತೆ ಇದೆ. ಘಟನೆಯಿಂದ ಕೆಲಕಾಲ ರಸ್ತೆ ಸಂಚಾರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments