Homeಅಪರಾಧವರದಕ್ಷಿಣೆಗಾಗಿ ಕಿರುಕುಳ - 2 ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ

ವರದಕ್ಷಿಣೆಗಾಗಿ ಕಿರುಕುಳ – 2 ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ, ಜೂ.25

ಬಳ್ಳಾರಿ ಜಿಲ್ಲೆಯ ಕೊಟ್ಟೂರು ವಾಸಿ ಮಂಜುನಾಥ್ ಇವರು ತಮ್ಮ ಪತ್ನಿ ಸುಮರವರಿಗೆ ಹೆಚ್ಚಿನ ವರದಕ್ಷಿಣೆ, ಸೈಟ್ ಹಾಗೂ ಬಂಗಾರ ತರಲು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾಗಿ ಹಾಗೂ ಜೀವ ಬೆದರಿಕೆ ಹಾಕಿದ್ದಾಗಿ 2017ರಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖಾಧಿಕಾರಿ ಪ್ರಭಾವತಿ ಸಿ. ಇವರು ಪ್ರಕರಣದ ತನಿಖೆ ನಡೆಸಿ 2018ರಲ್ಲಿ 2ನೇ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಆರೋಪಿ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿರುತ್ತಾರೆ.

ಸಾಕ್ಷಿ ವಿಚಾರಣೆ ನಡೆಸಿ ಪರಸ್ಪರ ವಾದವನ್ನು ಆಲಿಸಿದ ನ್ಯಾಯಾಧೀಶರಾದ ಸಿದ್ಧರಾಜು ಎನ್.ಕೆ. ಇವರು ದಿ:24/06/2026 ರಂದು ಆರೋಪಿ ಮಂಜುನಾಥನಿಗೆ ಕಲಂ.: 498(ಎ) ಐಪಿಸಿ ಅಪರಾಧಕ್ಕೆ ಮೂರು ವರ್ಷ ಸಾದಾ ಸಜೆ ಶಿಕ್ಷೆ ಹಾಗೂ ಹತ್ತು ಸಾವಿರ ರೂ.ಗಳ ದಂಡ ಹಾಗೂ ಕಲಂ.506 ಐಪಿಸಿಗೆ 2 ವರ್ಷ ಸಾದಾ ಶಿಕ್ಷೆ ಮತ್ತು ರೂ. 5000/- ದಂಡವನ್ನು ವಿಧಿಸಿ ತೀರ್ಪು ನೀಡಿರುತ್ತಾರೆ.

ಅಭಿಯೋಜನೆಯ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಜಿ.ಕೆ. ಕಿರಣ್‌ಕುಮಾರ್ ವಾದ ಮಂಡಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments