ಶಿವಮೊಗ್ಗ ಟೆಲೆಕ್ಸ್ ಸುದ್ದಿ, ಜೂ29
ದೇಶದ ಪ್ರತಿಯೊಬ್ಬ ಪ್ರಜೆಯೂ ಇಲ್ಲಿ ಮತದಾನದ ಹಕ್ಕು ಪಡೆದಿರುವುದು ಬಿಜೆಪಿ ಸರ್ಕಾರದಿಂದ ಅಲ್ಲ, ಅದು ಸಿಕ್ಕಿದ್ದು ಸಂವಿಧಾನದ ಮೂಲಕ ಹಾಗಾಗಿ ನಮಗೆ ಸಂವಿಧಾನವೇ ದೇವರು .ಆ ಮೂಲಕವೇ ನಾವು ನಮ್ಮ ಹಕ್ಕನ್ನು ಉಳಿಸಿಕೊಳ್ಳಬೇಕಿದೆ. ಕೇಂದ್ರದ ಬಿಜೆಪಿ ಸರ್ಕಾರದ ಎಸ್ ಐ ಆರ್ ದುರುದ್ದೇಶವನ್ನು ಆ ಮೂಲಕವೇ ತಡೆಯಬೇಕಿದೆ ಮಾಜಿ ಸಚಿವ ಮಧುಬಂಗಾರಪ್ಪ ಕರೆ ನೀಡಿದರು.
ಗಮನಿಸಿ: ಶಿಮುಲ್ ರಾಜ್ಯಕ್ಕೆ ದೊಡ್ಡ ಆರ್ಥಿಕ ನೆರವು: ಆರ್.ಎಂ.ಮಂಜುನಾಥ್
ನಾಳೆಯಿಂದ ಆರಂಭವಾಗುತ್ತಿರುವ ಮತದಾರರ ಪಟ್ಟಿಯ ತೀವ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್ ) ಹಿನ್ನಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದ ಶಿವಪ್ಪ ನಾಯಕ ಪ್ರತಿಮೆ ಬಳಿ ನಡೆದ ಎಸ್‌ಆರ್‌ಐ ಜಾಗೃತಿ ಬಹಿರಂಗ ಸಭೆ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ನಾಳೆಯಿಂದಲೇ ನಾವು ನಮ್ಮ ಕರ್ತವ್ಯ ಗಳಲ್ಲಿ ತೊಡಗಿಸಿಕೊಳ್ಳಬೇಕಿದೆ. ಸಂವಿಧಾನ ಪ್ರಕಾರ ನಾವು ಏನ್ ಮಾಡಬೇಕೋ ಅದನ್ನು ಮಾಡೋಣ, ಎಲ್ಲದ್ದಕ್ಕೂ ಉತ್ತರ ಇರುತ್ತದೆ. ನಿವಾಸಿ ಧೃಡಿಕರಣ ಸಮಸ್ಯೆ ಇದ್ದಲ್ಲಿ ನಾವೇ ಮುಂದೆ ನಿಂತು ಮಾಡಿಸಿ ಪ್ರತಿಯೊಬ್ಬರಿಗೂ ಮತದಾ ನದ ಹಕ್ಕು ಇರುವಂತೆ ನೋಡಿಕೊಳ್ಳುವ ಕೆಲಸ ಮಾಡಬೇಕಿದೆ ಎಂದು ಕಾಂಗ್ರಸ್ ಕಾರ್ಯಕರ್ತರಿಗೆ ಸೂಚಿಸಿದರು.
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಗೆ ಕೇಂದ್ರ ಸರ್ಕಾರವು ಒಂದು ತಿಂಗಳ ಕಾಲ ಮಿತಿ ನಿಗದಿ ಮಾಡಿರುವುದು ಎಷ್ಟು ಸರಿ, ಎಸ್‌ಆರ್‌ಐ ಎನ್ನುವುದು ಪ್ರಜಾ ಪ್ರಭುತ್ವದ ವಿರೋಧಿ. ಪ್ರಜಾ ಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಎಸ್‌ಐಆರ್ ಪ್ರಕ್ರಿಯೆಯನ್ನು ತಾರಾತುರಿಯಲ್ಲಿ ಮಾಡಲು ಹೊರಟಿದ್ದಾರೆ. ಹಾಗಾಗಿ ಎಸ್ ಐ ಆರ್ ಪ್ರಕ್ರಿಯೆಯನ್ನು ಇನ್ನಷ್ಟು ದಿನಗಳ ಕಾಲ ವಿಸ್ತರಣೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.
ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು , ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಮಾಜಿ ಸಂಸದ ಆಯನೂರು ಮಂಜುನಾಥ್, ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಎನ್. ರಮೇಶ್, ಸೂಡಾ ಅಧ್ಯಕ್ಷ ಹೆಚ್. ಎಸ್ ಸುಂದರೇಶ್, ಡಿಸಿಸಿಬ್ಯಾಂಕ್ ನಿರ್ದೇಶಕರಾದ ಎಂ, ಶ್ರೀಕಾಂತ್ , ಮುಖಂಡರಾಧ ಹೆಚ್.ಸಿ. ಯೋಗೇಶ್, ಕಲಗೋಡು ರತ್ನಾಕರ್, ಇಸ್ಮಾಯಿಲ್ ಖಾನ್, ಜಿ. ಪಲ್ಲವಿ, ಜವಳಿ ನಿಗಮದ ಅಧ್ಯಕ್ಷ ಚೇತನ್ ಕೆ. ಮತ್ತಿತರ ಮುಖಂಡರುಗಳು ಮಾತನಾಡಿ ಎಸ್ ಐ ಆರ್ ನಿಂದ ಯಾರೊಬ್ಬ ಮತದಾರರ ಕೈ ಬಿಟ್ಟು ಹೋಗದಂತೆ ಎಚ್ಚರವಹಿಸಲು ಕರೆ ನೀಡಿದರು.
