ಶಿವಮೊಗ್ಗ ಟೆಲೆಕ್ಸ್ ಸುದ್ದಿ, ಜು.14
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೊಸನಗರದ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಗೆ ದಿಢೀರ್ ಭೇಟಿ ನೀಡಿ ಶಾಲೆಯನ್ನು ಪರಿಶೀಲಿಸಿದರು.
ಮಂಗಳವಾರ ಹೊಸನಗರ ಮಾರ್ಗದಲ್ಲಿ ಹುಲಿಕಲ್ ಘಾಟ್ ದುರಸ್ಥಿ ವಿಕ್ಷಣೆಗೆ ಹೊರಡುತ್ತಿದ್ದ ವೇಳೆಯಲ್ಲಿ ದಿಢೀರ್ ಶಾಲೆಗೆ ಭೇಟಿ ನೀಡಿದರು.
ಶಾಲೆಯ ಪ್ರಾಂಶುಪಾಲರು ಹಾಗೂ ಸ್ಥಳೀಯ ನಾಯಕರೊಂದಿಗೆ ಚರ್ಚಿಸಿದರು. ಈ ವೇಳೆ ಪ್ರಾಂಶುಪಾಲರು ಶಾಲೆ ಮಕ್ಕಳ ಕ್ರೀಡಾ ಸಾಧನೆ ಬಗ್ಗೆ ವಿವರಿಸಿದರು.

ಈ ವೇಳೆ ಸಚಿವರು ಪ್ರತಿಕ್ರಿಯಿಸಿ, ಕಾಂಗ್ರೆಸ್ ಸರ್ಕಾರದಿಂದ ಬೃಹತ್ ಮಟ್ಟದಲ್ಲಿ ಭಾರತ್ ಜೋಡೋ ಕ್ರೀಡಾ ಕೂಟ ಆಯೋಜನೆ ಮಾಡಲಾಗುತ್ತಿದ್ದು, ಈ ಕ್ರೀಡಕೂಟದ ಸದುಪಯೋಗವನ್ನು ಕ್ರೀಡೆಯಲ್ಲಿ ಸಾಧನೆ ಮಾಡಿರುವ ನಿಮ್ಮ ಶಾಲೆಯ ಮಕ್ಕಳಿಗೆ ಪಡಿದುಕೊಳ್ಳುವಂತೆ ತಿಳಿಸಿದರು.
ಪ್ರಾಂಶುಪಾಲರು ಖಾಸಗಿ ಶಾಲೆಗಳ ವಿರುದ್ದ ಸರ್ಕಾರಿ ಶಾಲೆ ಅಭಿವೃದ್ದಿ ಹೊಂದುಬೇಕಾಗಿದೆ. ನಮ್ಮ ಶಾಲೆ ಕ್ರೀಡೆಯಲ್ಲಿ ಸಾಧನೆ ಮಾಡಿದೆ. ಆದರೆ ಮೂಲಭೂತ ಸೌಕರ್ಯ ಕೊರತೆಯಿಂದ ಬಳಲುತ್ತಿದೆ ಎಂದು ಅಹವಲು ತೊಡಿಕೊಂಡರು.
